ಚಿತ್ರದುರ್ಗಜಿಲ್ಲೆಯ 1.35 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ

ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಫೆ.೨೪; ರಾಷ್ಟ್ರೀಯ ಪಲ್ಸ್ ಕಾರ್ಯಕ್ರಮವು ಮಾರ್ಚ್ 03 ರಿಂದ 06 ರವರೆಗೆ ನಡೆಯಲಿದ್ದು, ಜಿಲ್ಲೆಯ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ 2024ರ ಮಾರ್ಚ್ 3 ರಿಂದ 6 ರವರೆಗೆ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಏರ್ಪಡಿಸಿದ್ದು, ಜಿಲ್ಲೆಯ 1,35,105 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ವ್ಯವಸ್ಥಿತವಾಗಿ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.