ಚಿತ್ರದುರ್ಗ ನಗರದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಅನಿರೀಕ್ಷಿತ ಭೇಟಿ, ಪರಿಶೀಲನೆ


ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜ.೨೫; ಪ್ರಸವಪೂರ್ವ ಮತ್ತು ಗರ್ಭಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ-1994 (ಪಿಸಿ & ಪಿಎನ್‍ಡಿಟಿ) ಮತ್ತು ತಿದ್ದುಪಡಿಗಳ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿ ಹಾಗೂ ಪಿಸಿ&ಪಿಎನ್‍ಡಿಟಿ ತಂಡದೊಂದಿಗೆ ಚಿತ್ರದುರ್ಗ ನಗರದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಈಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು, ಅಲ್ಲದೆ ಅಲ್ಲಿ ಕಂಡುಬಂದ ಕೆಲವು ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಸೂಚನೆ ನೀಡಿತು. ಪಿಸಿ&ಪಿಎನ್‍ಡಿಟಿ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಸಂಬಂಧ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಿ.ಪಿ.ರೇಣುಪ್ರಸಾದ್ ಹಾಗೂ ಸಮಿತಿಯ ಸದಸ್ಯರಾದ ಡಾ. ಸತ್ಯನಾರಾಯಣ ಅವರು ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಗಂಗಾಂಭಿಕ ಬೆಸ್ತರ ಸಂಘದ ಬಿಲ್ಡಿಂಗ್‍ನ ವೇದಾಂತ ಆಸ್ಪತ್ರೆ, ಬನ್ನಿಮಂಟಪ ಮುಂಭಾಗದ ಮಾತೃತ್ವ ಮೆಟರ್ನಿಟಿ ಹಾಗೂ ಫರ್ಟಿಲಿಟಿ ಸೆಂಟರ್‍ಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಪರಶೀಲನೆ ನಡೆಸಲಾಯಿತು.
ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್  ಹಾಗೂ ಕೆಪಿಎಂಇ ಕಾಯ್ದೆಗೆ ಸಂಬಂಧಪಟ್ಟಂತೆ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಸೂಚಿಸಿದರು.