
ಚಿತ್ರದುರ್ಗ, ಮೇ.13: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಹೊಳಲ್ಕೆರೆ ಹೊರತು ಪಡಿಸಿ ಉಳಿದ 5 ಕ್ಷೇತ್ರಗಳನ್ನು ಕಾಂಗ್ರೇಸ್ ಅಭ್ಯರ್ಥಿಗಳು ಜಯಗಳಿಸುವ ಮೂಲಕ ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಿದೆ.ಎಸ್ಟಿ ಕೇತ್ರವಾಗಿರುವ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದ ಹಾಲಿ ಶಾಸಕರಾಗಿರುವ ಟಿ.ರಘುಮೂರ್ತಿ ಅವರು ತಮ್ಮ ಪ್ರತಿಸ್ಪರ್ಧಿ ಜೆಡಿಎಸ್ ಪಕ್ಷದ ಎಂ.ರವೀಶ್ ಕುಮಾರ್ ವಿರುದ್ದ 16127 ಮತಗಳನ್ನು ಪಡೆಯುವ ಮೂಲಕ ಹ್ಯಾಟ್ರಿಕ್ (ಮೂರನೇ ಭಾರೀ) ಗೆಲುವು ಸಾಧಿಸಿದ್ದಾರೆ. ಇನ್ನೂ ಬಿಜೆಪಿ ಅಭ್ಯರ್ಥಿ ಎಂ.ಅನಿಲ್ ಕುಮಾರ್ ಅವರು 18339 ಮತಗಳನ್ನು ಪಡೆದು 3 ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ಲಿಂಗಮೂರ್ತಿ ಅವರು 47527 ಪಡೆದರೆ ಕಾಂಗ್ರೇಸ್ ನ ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಅವರು 79967 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ.ಪಕ್ಷೇತರ ಅಭ್ಯರ್ಥಿ ಟಿ.ಮಂಜುನಾಥ್ ಅವರು 20572 ಮತಗಳಿಂದ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ. ಕ್ಷೇತ್ರದ ಹಾಲಿ ಶಾಸಕರಾಗಿದ್ದ ಗೂಳಿಹಟ್ಟಿ ಡಿ.ಶೇಖರ್ ಅವರು 10387 ಮತಗಳನ್ನು ಪಡೆದು ನಾಲ್ಕನೇ ಸ್ಥಾನದಲ್ಲಿದ್ದಾರೆ.ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಚತುರರು ಎಂದೇ ಗುರುತಿಸಿಕೊಂಡಿದ್ದ ಜಿ.ಹೆಚ್.ತಿಪ್ಪಾರೆಡ್ಡಿ ಅವರು ಪ್ರತಿಸ್ಪರ್ಧಿ ಕಾಂಗ್ರೇಸ್ ನ ಅಭ್ಯರ್ಥಿ ಕೆ.ಸಿ.ವಿರೇಂದ್ರಪಪ್ಪಿ ಅವರ ವಿರುದ್ದ ಸೋಲನಭವಿಸಿದ್ದಾರೆ.ಎಸ್ಟಿ ಮೀಸಲು ಕ್ಷೇತ್ರವಾಗಿರುವ ರೇಷ್ಮೇ ನಗರಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ವಿರುದ್ದ ಕಾಂಗ್ರೇಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ ಅವರು ಜಯ ಗಳಿಸಿದ್ದಾರೆ.ಎಸ್ಸಿ ಮೀಸಲು ಕ್ಷೇತ್ರವಾದ ಹೊಳಲ್ಕೆರೆಯಲ್ಲಿ ಹಾಲಿ ಶಾಸಕ ಬಿಜೆಪಿಯ ಎಂ.ಚಂದ್ರಪ್ಪ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೇಸ್ ಪಕ್ಷದ ಮಾಜಿ ಸಚಿವ ಹೆಚ್.ಆಂಜನೇಯ ವಿರುದ್ದ ಜಯ ಗಳಿಸಿದ್ದಾರೆ.ಸಾಮಾನ್ಯ ಕ್ಷೇತ್ರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಮಾಜಿ ಸಚಿವ ಡಿ.ಸುಧಾಕರ್ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಹಾಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ವಿರುದ್ದ ಜಯಗಳಿಸಿದ್ದು, ಜೆಡಿಎಸ್ ಅಭ್ಯರ್ಥಿ ಎಂ.ರವೀಂದ್ರಪ್ಪ ಅವರು ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಕಳೆದ ಭಾರೀಯ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಬಿಜೆಪಿ ಚಳ್ಳಕೆರೆಯನ್ನು ಹೊರತುಪಡಿಸಿ ಉಳಿದ 5 ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡಿತ್ತು. ಅಲ್ಲದೆ, ಓರ್ವ ಸಂಸದರು, ನಾಲ್ಕು ವಿಧಾನ ಪರಿಷತ್ ಸದಸ್ಯರನ್ನು ಹೊಂದಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯನ್ನು ಬಿಜೆಪಿ ಭದ್ರಕೋಟೆಯನ್ನಾಗಿ ಮಾಡಿಕೊಂಡಿತ್ತು. ಆದರೆ ಈ ಭಾರೀಯ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ಬಿಜೆಪಿಯ ಕೇಂದ್ರ ಹಾಗೂ ರಾಜ್ಯದ ನಾಯಕರುಗಳು ಸೇರಿದಂತೆ ಚಲನಚಿತ್ರ ತಾರೆಯರು ಜಿಲ್ಲೆಯಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡದರು ಕೂಡ ತಮ್ಮ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಆಗದೆ ಕಾಂಗ್ರೇಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ.
2014 ರ ವಿಧಾನಸಭಾ ಚುನಾವಣೆಯಲ್ಲಿ 5 ಕ್ಷೇತ್ರಗಳನ್ನು ಗೆದ್ದಿದ್ದ ಕಾಂಗ್ರೇಸ್ ಈ ಭಾರೀ ಪುನಃ 5 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಕಾಂಗ್ರೇಸ್ ಕಲ್ಲಿನ ಕೋಟೆ ಚಿತ್ರದುರ್ಗವನ್ನು ಪುನಃ ತನ್ನ ಭದ್ರ ಕೋಟೆಯಾಗಿನ್ನಾಗಿ ಮಾರ್ಪಡಿಸಿಕೊಂಡಿದೆ.