ಚಿತ್ರದುರ್ಗ ಲೋಕಸಭಾ ಚುನಾವಣೆ: ಏ.24ರ ಸಂಜೆ 6ಕ್ಕೆ ಬಹಿರಂಗ ಪ್ರಚಾರ ಅಂತ್ಯ

??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಸಂಜೆವಾಣಿ ವಾರ್ತೆ

ಚಿತ್ರದುರ್ಗ.ಏ.೨೩; ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಇದೇ ಏಪ್ರಿಲ್ 26ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುಂಚೆ ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬAಧ ಚುನಾವಣಾ ವಿಷಯಗಳ ಕುರಿತು ಅಭ್ಯರ್ಥಿ ಹಾಗೂ ಏಜೆಂಟರೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುಂಚೆ ಬಹಿರಂಗ ಪ್ರಚಾರ ಮುಕ್ತಾಯಗೊಳಿಸಬೇಕು. ಅಂದರೆ ಇದೇ ಏಪ್ರಿಲ್ 24ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯಗೊಳಿಸಬೇಕು. ಆದರೆ ಅಭ್ಯರ್ಥಿಗಳು ಮಾತ್ರ ಮನೆ ಮನೆ ಪ್ರಚಾರ ಮಾಡಬಹುದಾಗಿದೆ. ಮನೆ ಮನೆ ಮತಯಾಚನೆ ವೇಳೆ 10 ಜನಕ್ಕಿಂತ ಹೆಚ್ಚಿನ ಜನರು ಇರುವಂತಿಲ್ಲ ಎಂದು ಹೇಳಿದರು.ಮತದಾರರ ಒಲೈಕೆಗಾಗಿ ಮತದಾನದ ಹಿಂದಿನ ದಿನ ಉಚಿತ ಉಡುಗೊರೆ, ಹಣ ಹಂಚಿಕೆ, ಆಮಿಷ ಒಡ್ಡುವುದು ಸೇರಿದಂತೆ ಮತದಾರರಿಗೆ ಮತಗಟ್ಟೆಗಳಿಗೆ ಕರೆದುಕೊಂಡು ಬರಲು ಮತ್ತು ಹೋಗಲು ವಾಹನ ವ್ಯವಸ್ಥೆ, ತಿಂಡಿ, ಊಟದ ವ್ಯವಸ್ಥೆ ಮಾಡತಕ್ಕದ್ದಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಮತದಾನ ಕೇಂದ್ರದ 200 ಮೀಟರ್ ವ್ಯಾಪ್ತಿಯ ನಂತರ ಚಿಕ್ಕದಾಗಿ ಹೆಲ್ಪ್ ಡೆಸ್ಕ್ ತೆರೆಯಲು ಅವಕಾಶವಿದೆ. ಇದಕ್ಕೆ ಸಂಬAಧಪಟ್ಟ ಎಆರ್‌ಒ ಅನುಮತಿ ನೀಡಲಿದ್ದು, ಅನುಮತಿ ಪಡೆದು ಹೆಲ್ಪ್ ಡೆಸ್ಕ್ ತೆರೆಯಬೇಕು. ಒಬ್ಬ ಅಭ್ಯರ್ಥಿ ಅಥವಾ ಅಭ್ಯರ್ಥಿ ಪರವಾಗಿರುವ ಏಜೆಂಟ್ ಅವರು ಮೂರು ವಾಹನಗಳ ಬಳಸುವುದಕ್ಕೆ ಮಾತ್ರ ಅವಕಾಶವಿದೆ. ಈ ಮೂರು ವಾಹನಗಳಿಗೆ ಕಡ್ಡಾಯವಾಗಿ ಅನುಮತಿಯನ್ನು ಮೊದಲೇ ಪಡೆದಿರಬೇಕು. ಒಂದು ವಾಹನದಲ್ಲಿ ವಾಹನ ಚಾಲಕರು ಸೇರಿದಂತೆ 4 ಜನರಿಗಿಂತ ಹೆಚ್ಚು ಜನರು ಇರುವಂತಿಲ್ಲ ಎಂದು ಹೇಳಿದರು.