ಚಿತ್ರದುರ್ಗ: 96 ಹಜ್ ಯಾತ್ರಿಗಳಿಗೆ ಲಸಿಕೆ

????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಚಿತ್ರದುರ್ಗ.ಮೇ.೧೮; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಜ್ ಯಾತ್ರಾರ್ಥಿಗಳ ಸೇವಾ ಕಮಿಟಿ ವತಿಯಿಂದ ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಬುಧವಾರ ಚಿತ್ರದುರ್ಗ ಜಿಲ್ಲೆಯ 96 ಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಲಸಿಕಾ ಕಾರ್ಯಕ್ರಮ ಹಾಗೂ ತರಬೇತಿ ನೀಡಲಾಯಿತು.  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಬೇರೆ ದೇಶಕ್ಕೆ ಪ್ರಯಾಣ ಮಾಡುವಾಗ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಹಜ್ ಯಾತ್ರಿಗಳಿಗೆ ಆರೋಗ್ಯ ತಪಾಸಣೆ, ಲಸಿಕೆ ಕಾರ್ಯಕ್ರಮ ಹಾಗೂ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಹೇಳಿದರು.  ಹಜ್ ಯಾತ್ರಾರ್ಥಿಗಳಿಗೆ ಬಹಳ ಮುಖ್ಯವಾಗಿ ಮೆದುಳು ಜ್ವರಕ್ಕೆ ಸಂಬಂಧಪಟ್ಟ ಲಸಿಕೆ, ಶೀತ, ಕೆಮ್ಮು, ಜ್ವರ, ಕೊರೊನಾದಂತಹ ಕಾಯಿಲೆಗಳಿಗೆ ಲಸಿಕೆ ಹಾಗೂ ಪೊಲಿಯೋ ಲಸಿಕೆ ನೀಡಲಾಗುತ್ತಿದೆ. 96 ಹಜ್ ಯಾತ್ರಿಗಳು ಕಡ್ಡಾಯವಾಗಿ ಲಸಿಕೆ ಹಾಗೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಸ್ಥಾನಿಕ ವೈದ್ಯಾಧಿಕಾರಿ ಡಾ.ಆನಂದ ಪ್ರಕಾಶ್, ರಾಜ್ಯ ವಕ್ಫ್ ಸಲಹಾ ಸಮಿತಿ ರಾಜ್ಯಾಧ್ಯಕ್ಷ ಅನ್ವರ್ ಬಾಷಾ, ರಾಜ್ಯ ಹಜ್ ಸಮಿತಿ ನೋಡಲ್ ಅಧಿಕಾರಿ ಶಂಶುನ್ನಿಸಾ, ಜಿಲ್ಲಾ ವಕ್ಫ್ ಸಲಹಾ ಸಮಿತಿ ಜಿಲ್ಲಾಧ್ಯಕ್ಷ ಇಕ್ಬಾಲ್ ಹುಸೇನ್, ಜಿಲ್ಲಾ ವಕ್ಫ್ ಅಧಿಕಾರಿ ಅಮ್ಜದ್ ಮುಯೀನ್, ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಹಾಜಿ ಆರ್. ದಾದಾಪೀರ್, ಜಿಲ್ಲಾ ಆರೋಗ್ಯ ತಪಾಸಣೆ ಮತ್ತು ಲಸಿಕಾ ತಂಡದ ಹಿರಿಯ ಆರೋಗ್ಯ ನಿರೀಕ್ಷಾಣಾಧಿಕಾರಿ ಶ್ರೀಧರ್, ಗಂಗಾಧರ್, ರಂಗಾರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು.