ಚಿತ್ರರಂಗಕ್ಕೂ ಪ್ಯಾಕೇಜ್ ಪ್ರಕಟಿಸಲು ಆಗ್ರಹ

ಬೆಂಗಳೂರು, ಮೇ.೨೧- ರಾಜ್ಯದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ವಿವಿಧ ಸಮುದಾಯಗಳಿಗೆ ಆರ್ಥಿಕ ಪ್ಯಾಕೇಜ್ ಪ್ರಕಟಿಸಿದ ಮಾದರಿಯಲ್ಲಿ ಚಿತ್ರರಂಗಕ್ಕೂ ಪ್ಯಾಕೇಜ್ ಪ್ರಕಟಿಸುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಕಾರ್ಯದರ್ಶಿ ಭಾ.ಮ ಹರೀಶ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಚಿತ್ರನಟ ಜೆಕೆ ,ನಿರ್ದೇಶಕ ಆಸ್ಕರ್ ಕೃಷ್ಣ ಅವರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚಿತ್ರರಂಗದ ಪರವಾಗಿ ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಬದುಕು ದುಸ್ತರವಾಗಿದೆ. ಹಿನ್ನಲೆಯಲ್ಲಿ ಕಷ್ಟದಲ್ಲಿರುವ ಜನರಿಗೆ ಸರ್ಕಾರ ಆರ್ಥಿಕ ಪ್ಯಾಕೇಜ್ ಪ್ರಕಟಿಸಿದೆ ಅದೇರೀತಿಯಲ್ಲಿ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ವಿವಿಧ ವಿಭಾಗಗಳು ಪ್ಯಾಕೇಜ್ ಪ್ರಕಟಿಸಿ ಎಂದು ಮನವಿ ಸಲ್ಲಿಸಿದ್ದಾರೆ.
ಸರ್ಕಾರ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ವಿವಿಧ ವಿಭಾಗಗಳ ಜನರಿಗೆ ಪ್ಯಾಕೇಜ್ ಪ್ರಕಟಿಸುವ ಮೂಲಕ ಸಂಕಷ್ಟದಲ್ಲಿರುವ ಚಿತ್ರರಂಗದ ಮಂದಿಗೆ ನೆರವಾಗುವಂತೆ ಭಾ.ಮ ಹರೀಶ್ ಮನವಿ ಮಾಡಿದ್ದಾರೆ
.