ಚಿದಂಬರ ಶಿಕ್ಷಣ ಸಂಸ್ಥೆ: ಕ.ಕ. ಉತ್ಸವ ದಿನಾಚರಣೆ

ಬೀದರ್:ಸೆ.18: ನಗರದ ಚಿದಂಬರಾಶ್ರಮದಲ್ಲಿ ಚಿದಂಬರ ಶಿಕ್ಷಣ ಸಂಸ್ಥೆ ಸಂಚಾಲಿತ ಶಾಲಾ ಕಾಲೇಜುಗಳ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನು ಹರ್ಷೋಲ್ಲಾಸದೊಂದಿಗೆ ಆಚರಿಸಲಾಯಿತು.

ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಚಿದಂಬರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಶಿವಕುಮಾರ ಸ್ವಾಮೀಜಿ ಅವರು, ಅನೇಕ ಮಹಾ ಪುರುಷರ ತ್ಯಾಗ, ಬಲಿದಾನದಿಂದ ದೊರೆತ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು ಹೋಗುವುದು

ಎಲ್ಲರ ಹೊಣೆಯಾಗಿದೆ ಎಂದು ಹೇಳಿದರು.

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಭಾರತ ಪರಕೀಯರ ಆಳ್ವಿಕೆಯಿಂದ ನೂರಾರು ವರ್ಷ ಹಿಂಸೆ ಅನುಭವಿಸಬೇಕಾಯಿತು ಎಂದು ತಿಳಿಸಿದರು.

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ಸಿದ್ಧಾರೂಢ ಪಬ್ಲಿಕ್ ಶಾಲೆ ಪ್ರಾಚಾರ್ಯ ಮಲ್ಲಿನಾಥ ಮಠಪತಿ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಕಾರ್ಯದರ್ಶಿ ಡಾ. ಚನ್ನಬಸಪ್ಪ ಹಾಲಹಳ್ಳಿ, ಜಂಟಿ ಕಾರ್ಯದರ್ಶಿ ಬಿ.ಜಿ. ಶೆಟಕಾರ್, ಆಡಳಿತ ಮಂಡಳಿ ಸದಸ್ಯರಾದ ಶಿವಶರಣಪ್ಪ ಸಾವಳಗಿ, ಮಡಿವಾಳಪ್ಪ ಗಂಗಶೆಟ್ಟಿ, ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ, ಶ್ರೀನಾಥ ಮಸ್ಕಲೆ, ಬಸವರಾಜ ಮ್ಯಾಗೆರೆ, ಡಾ. ಚಂದ್ರಪ್ಪ ಭತಮುರ್ಗೆ, ಲಕ್ಷ್ಮಣ ಎಂ. ಪೂಜಾರಿ, ಮಾಣಿಕರಾವ್ ಬಿ. ಪಾಂಚಾಳ್, ಡಾ. ಶ್ರೀದೇವಿ ಸ್ವಾಮಿ ಇದ್ದರು.