ಚಿನ್ನಾಪುರದಲ್ಲಿ ಪೌಷ್ಠಿಕ ಆಹಾರ ಮೇಳ

ಸಂಜೆವಾಣಿ ವಾರ್ತೆ
ಹೊಸಪೇಟೆ ಸೆ19: ಗರ್ಭಿಣಿ ಮತ್ತು ಬಾಣಂತಿಯರು ಪೌಷ್ಠಿಕತೆ ಪ್ರಮಾಣ ವೃದ್ಧಿ ಹೆಚ್ಚಿಸಿಕೊಳ್ಳುವ ಮೂಲಕ ಉತ್ತಮ ಅರೋಗ್ಯ ಹೊಂದಬೇಕು ಎಂದು  ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧು ಯಲಿಗಾರ್ ಹೇಳಿದರು.
ರಾಷ್ಟ್ರೀಯ ಪೋಷಣ ಮಾಸಾಚರಣೆಯ ಅಂಗವಾಗಿ ಶಿಶು ಅಭಿವೃದ್ಧಿ ಯೋಜನೆಯಡಿ ತಾಲ್ಲೂಕಿನ ಚಿನ್ನಾಪುರ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಮೇಳ ಉದ್ಘಾಟಿಸಿ  ಮಾತನಾಡಿದ ಅವರು, ಗರ್ಭಿಣಿ ಮತ್ತು ಬಾಣಂತಿಯರು ಅಂಗನವಾಡಿ ಕೇಂದ್ರಗಳಿಂದ ವಿತರಿಸುವ ಆಹಾರ ಸಾಮಗ್ರಿಗಳನ್ನು ಪೌಷ್ಠಿಕ ಆಹಾರ ಸೇವಿಸುವುದರ ಮೂಲಕ ಪೌಷ್ಠಿಕತೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ಪೋಷಣ್ ಮಾಸಾಚರಣೆ ಜನಾಂದೋಲನ ಕಾರ್ಯಕ್ರಮದ ಮೂಲಕ ಕಿಶೋರಿ, ಗರ್ಭಿಣಿ ಮತ್ತು ಬಾಣಂತಿಯರಲ್ಲಿ ಪೌಷ್ಠಿಕತೆ ಹೆಚ್ಚಿಸುವ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಅನುಕೂಲವಾಗುತ್ತದೆ. ಎಲ್ಲಾ ಗರ್ಭಿಣಿ ಮಹಿಳೆಯರು ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಪೌಷ್ಠಿಕ ಮೇಳದಲ್ಲಿ ವಿವಿಧ ಬಗೆಯ ಪೌಷ್ಠಿಕಾಂಶಯುಕ್ತ ತಿನಿಸುಗಳನ್ನು ಕಾರ್ಯಕರ್ತೆಯರು ತಯಾರಿಸಿ ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಳೆನಾಗಪ್ಪ, ಸೀತಾರಾಮತಾಂಡ ಗ್ರಾಮ ಪಂಚಾಯತಿ ಸದಸ್ಯ ಹುಲುಗಪ್ಪ, ಮೇಲ್ವಿಚಾರಕಿ ಎಲ್.ಡಿ ನದಾಫ್, ಕಲಿಕಾ ಟ್ರಸ್ಟ್ ಕೊಟ್ರೇಶ, ಜಗನ್ನಾಥ, ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.