ಚಿಪ್ಪು ಹಂದಿಯ ಚಿಪ್ಪುಗಳ ಮಾರಾಟ ಇಬ್ಬರು ಸೆರೆ

ಬೆಂಗಳೂರು, ಅ.೨೨- ಅಳಿವಿನ ಅಂಚಿನಲ್ಲಿರುವ ಚಿಪ್ಪು ಹಂದಿಯ ಚಿಪ್ಪುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ.
ಇಬ್ರಾಹಿಂ ಹಾಗೂ ಮರಿಸ್ವಾಮಿ ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರಿಂದ ೮ ಕೆ.ಜಿ ೨೦೦ ಗ್ರಾಂ ತೂಕದ ಚಿಪ್ಪು ಹಂದಿಯ ಚಿಪ್ಪು ಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಅನ್ನಪೂರ್ಣೇಶ್ವರಿನಗರದ ಬಳಿ ಆರೋಪಿಗಳು ಚಿಪ್ಪು ಹಂದಿಯ ಚಿಪ್ಪು ಗಳನ್ನು ಮಾರಾಟ ಮಾಡಲು ಬಂದಿದ್ದ ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.