ಚಿಮಕೋಡನಲ್ಲಿ ಬಿಜೆಪಿ ಸಮಾವೇಶ

ಬೀದರ: ಸೆ.17:ಬಿಜೆಪಿ ಬೀದರ್ ಗ್ರಾಮಾಂತರ ಮಂಡಲನ ಬೂತ್ ಮಟ್ಟದ ಅಧ್ಯಕ್ಷರ ಸಮಾವೇಶ ಗುರುವಾರ ತಾಲೂಕಿನ ಚಿಮಕೋಡ್‍ನ ನಂದಿ ಬಸವೇಶ್ವರ ಮಂದಿರದಲ್ಲಿ ನಡೆಯಿತು.

ಬಿಜೆಪಿ ಕಲಬುರಗಿ ವಿಭಾಗದ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್ ಉದ್ಘಾಟಿಸಿ ಮಾತನಾಡಿ, ಮುಂಬರುವ ಜಿಪಂ, ತಾಪಂ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ಜಿಪಂ ಹಾಗೂ ಎಲ್ಲ ತಾಪಂನಲ್ಲಿ ಪಕ್ಷ ಆಡಳಿತಕ್ಕೆ ಬರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವಾನಂದ ಮಂಠಾಳಕರ್ ಮಾತನಾಡಿ, ಸೆ.17ರಿಂದ ಜಿಲ್ಲಾದ್ಯಂತ ಸೇವೆ ಮತ್ತು ಸಮರ್ಪಣಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಯಶಸ್ವಿಗೊಳಿಸಲು ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಸಹಕರಿಸಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಮಂಡಲ ಅಧ್ಯಕ್ಷ ರಾಜೇಂದ್ರ ಪೂಜಾರಿ ಮಾತನಾಡಿ, ಗ್ರಾಮೀಣ ಮಂಡಲ ವ್ಯಾಪ್ತಿಗೆ ಬರುವ ಎಲ್ಲ ಹಳ್ಳಿಗಳಲ್ಲಿ ಪಕ್ಷ ಸಂಘಟನೆ ಮಾಡಲಾಗುತ್ತಿದೆ. ಬರುವ ಜಿಪಂ, ತಾಪಂ ಚುನಾವಣೆಯಲ್ಲಿ ನಮ್ಮ ಮಂಡಲ ವ್ಯಾಪ್ತಿಗೆ ಬರುವ ಕ್ಷೇತ್ರದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬು ವಾಲಿ, ಪಕ್ಷದ ಜಿಲ್ಲಾ ಸಹ ಪ್ರಭಾರಿ ವಿದ್ಯಾಸಾಗರ ಶಾಬಾದಿ, ಪ್ರಮುಖರಾದ ಸೂರ್ಯಕಾಂತ ದೋನಿ, ಮಲ್ಲಿಕಾರ್ಜುನ ಕುಂಬಾರ, ಅರಹಂತ ಸಾವಳೆ, ಕುಶಾಲ ಪಾಟೀಲ್ ಗಾದಗಿ, ಮಹೇಶ್ವರ ಸ್ವಾಮಿ, ಪೀರಪ್ಪ ಯರನಳ್ಳಿ, ರಾಜಕುಮಾರ ಪಾಟೀಲ್, ಅರುಣ ಬಿನ್ನಡಿ ಇತರರಿದ್ದರು.