ಚಿರತೆ ದಾಳಿ: 4 ಕುರಿಗಳು ಬಲಿ

ಸಂಜೆವಾಣಿ ವಾರ್ತೆ
ಹನೂರು ಫೆ 27 :- ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ಶಾಲೆಯ ಹಿಂಭಾಗ ನಿನ್ನೆ ತಡೆ ರಾತ್ರಿ ಚಿರತೆ ದಾಳಿ ನಡೆಸಿ ನಾಲ್ಕು ಕುರಿಗಳು ಬಲಿಯಾಗಿರುವ ಘಟನೆ ಜರುಗಿದೆ.
ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂದನಪಾಳ್ಯದ ಪಾಸ್ಕಾ ಮೇರಿ ರವರಿಗೆ ಸೇರಿದ ಕುರಿಗಳನ್ನು ಚಿರತೆ ದಾಳಿಗೆ ಬಲಿಯಾಗಿದೆ. ಕುಟುಂಬ ನಿರ್ವಹಣೆಗೆ ಕುರಿ ಸಾಕಣಿಕೆಯನ್ನು ನಂಬಿ ಜೀವನ ನಡೆಸುತ್ತಿದ್ದರು ದಾಳಿಯಿಂದ ಕಂಗಲಾರಾಗಿದ್ದಾರೆ ಚಿರತೆ ಹಾವಳಿ ಹೆಚ್ಚಾಗಿದ್ದು ಇದರಿಂದ ಈ ಭಾಗದ ಜನರ ಭಯಭೀತರಾಗಿ ಇಲ್ಲಿನ ಜನರ ನಿದ್ದೆಗೆಡಿಸಿದೆ.
ಇತ್ತೀಚಿನ ದಿನಗಳಲ್ಲಿ ಚಿರತೆ ಪದೇ ಪದೆ ಕಾಣಿಸಿ ಕೊಳುತ್ತಿದ್ದು ಸಾಕು ಪ್ರಾಣಿಗಳನ್ನು ಬಲಿ ಪಡೆಯುತ್ತಿದೆ. ಇದರಿಂದ ರೈತರು ಜಮೀನುಗಳಿಗೆ ತೆರಳಲು ಭಯ ಪಡುವಂತಾಗಿದೆ.ಆದ್ದರಿಂದ ಅರಣ್ಯ ಇಲಾಖೆಯವರು ಚಿರತೆಯನ್ನು ಶೀಘ್ರದಲ್ಲೇ ಸೆರೆ ಮಾಡಬೇಕೆಂದು ಗ್ರಾಮಸ್ಥರು ಅಗ್ರಹಿಸಿದ್ದಾರೆ.