ಚಿರತೆ ಬೋನಿಗೆ ಸೆರೆ

ಚಾಮರಾಜನಗರ: ಸೆ.26: ತಾಲ್ಲೂಕಿನ ವೀರನಪುರ ಬಳಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದು ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.
ಚಿರತೆಯು ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಚಿರತೆ ಹಾವಳಿ ತಡೆಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು. ಕಳೆದ ನಾಲ್ಕು ದಿನಗಳ ಹಿಂದೆ ಅಧಿಕಾರಿಗಳು ಚಿರತೆ ಸೆರೆಗೆ ಬೋನ್ ಇರಿಸಿದ್ದರು.
ಚಿರತೆ ಕೊನೆಗೂ ಬೋನಿಗೆ ಸೆರೆಯಾಗಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ.