ಚಿರತೆ ಸೆರೆಗೆ ತೀವ್ರ ಕಾರ್ಯಾಚರಣೆ

ಧಾರವಾಡ, ಸೆ.24: ಬುಧವಾರ ರಾತ್ರಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಚಿರತೆ ಕಂಡು ಬಂದಿರುವ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮಕ್ಕೆ ಭೇಟಿ ನೀಡಿ, ಕಾರ್ಯಾಚರಣೆ ಪರಿಶೀಲಿಸಿದರು.
ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಂದ ಕೂಬಿಂಗ್ ಕಾರ್ಯದ ಕುರಿತು ಮಾಹಿತಿ ಪಡೆದರು. ನಂತರ ಅವರು ಅಲ್ಲಿ ನೆರೆದಿದ್ದ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ, ಚಿರತೆ ಪತ್ತೆ ಮಾಡಿ, ಸೆರೆ ಹಿಡಿಯುವ ಕಾರ್ಯ ತೀವ್ರಗೊಳಿಸಲಾಗುವುದು ಗ್ರಾಮಸ್ಥರು ಸಹ ಸಹಕಾರ ನೀಡಬೇಕು. ಜಿಲ್ಲಾಡಳಿತದಿಂದ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ ಬಿ., ಪೆÇ್ರಬೇಷನರಿ ಐಎಎಸ್ ಅಧಿಕಾರಿ ಮಾಧವ ಗಿತ್ತೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ, ತಹಸಿಲ್ದಾರ ಡಾ.ಸಂತೋಷ ಬಿರಾದರ, ಅಮ್ಮಿನಭಾವಿ ಕಂದಾಯ ನಿರೀಕ್ಷಕ ರಮೇಶ ಬಂಡಿ, ಗ್ರಾಮಲೆಕ್ಕಾಧಿಕಾರಿ ಚೇತನ, ಕವಲಗೇರಿ ಗ್ರಾಮ ಪಂಚಾಯತ ಸದಸ್ಯ ಮುತ್ತು ಇಂಚಲ ಸೇರಿದಂತೆ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು.