ಚೀನಾ ಕ್ಯಾತೆಗೆ ಅಮೆರಿಕ ತಿರುಗೇಟು

ಹೈದರಾಬಾದ್/ನ್ಯೂಯಾರ್ಕ್, ಏ. ೫: ಭಾರತದ ಗಡಿ ಪ್ರದೇಶದಲ್ಲಿ ಚೀನಾ ಮೂಗು ತೂರಿಸುವುದನ್ನು ಮುಂದುವರೆಸಿದೆ. ಅರುಣಾಚಲ ಪ್ರದೇಶದ ೧೧ ಸ್ಥಳಗಳಿಗೆ ಹೆಸರುಗಳನ್ನು ಮರುನಾಮಕರಣ ಮಾಡಿರುವ ಚೀನಾಕ್ಕೆ ಅಮೆರಿಕ ತಿರುಗೇಟು ನೀಡಿದೆ. “
ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ “ವೆಂದು ಗುರುತಿಸಲಾಗಿದೆ. ಈ ಪ್ರದೇಶಗಳನ್ನು ಮರುನಾಮಕರಣ ಮಾಡುವ ಮೂಲಕ ಪ್ರಾದೇಶಿಕ ಹಕ್ಕುಗಳನ್ನು ಮುಂದಿಡುವ ಯಾವುದೇ ಏಕಪಕ್ಷೀಯ ಪ್ರಯತ್ನಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಶ್ವೇತಭವನ ತಿಳಿಸಿದೆ.
ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ೧೧ ಸ್ಥಳಗಳ ಅಧಿಕೃತ ಹೆಸರುಗಳನ್ನು ಭಾನುವಾರ ಬಿಡುಗಡೆ ಮಾಡಿದೆ. ಆದರೆ, ಅರುಣಾಚಲ ಪ್ರದೇಶದ ಈ ಪ್ರದೇಶಗಳು ದೀರ್ಘಕಾಲದವರೆಗೆ ಭಾರತದಲ್ಲಿ ಗುರುತಿಸಿಕೊಂಡಿದ್ದು, ಇವು ಇವು ಭಾರತದ ಅವಿಭಾಜ್ಯ ಅಂಗವಾಗಿವೆ.
ಈ ಪ್ರದೇಶಗಳನ್ನ ಮರುನಾಮಕರಣ ಮಾಡುವ ಮೂಲಕ ಪ್ರಾದೇಶಿಕ ಹಕ್ಕುಗಳನ್ನು ಮುಂದಿಡುವ ಚೀನಾದ ಏಕಪಕ್ಷೀಯ ಪ್ರಯತ್ನಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ಈ ವಿಚಾರವಾಗಿ ನಾವು ದೀರ್ಘಕಾಲದಿಂದ ಭಾರತದ ಪರವಾಗಿ ನಿಂತಿದ್ದೇವೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಚೀನಾ ಗಡಿ ಸಮೀಪ ಭಾರತ-ಯುಎಸ್ ಸೇನೆಯಿಂದ ಸಮರಾಭ್ಯಾಸ : ವಿಡಿಯೋ”ಅರುಣಾಚಲ ಪ್ರದೇಶದ ಕೆಲವು ಸ್ಥಳಗಳಿಗೆ ಚೀನಾ ದೇಶವು ಮರು ನಾಮಕರಣ ಮಾಡುವುದನ್ನು ಭಾರತವು ಸಂಪೂರ್ಣವಾಗಿ ತಿರಸ್ಕರಿಸುತ್ತದೆ. ರಾಜ್ಯವು ಭಾರತದ ಅವಿಭಾಜ್ಯ ಅಂಗವಾಗಿದೆ. ಹೀಗೆ ಹೆಸರುಗಳನ್ನು ಬದಲಾಯಿಸುವುದರಿಂದ ವಾಸ್ತವತೆಯನ್ನ ಬದಲಾಯಿಸಲಾಗುವುದಿಲ್ಲ. ಈ ಹಿಂದೆ ಕೂಡ ಇಂತಹ ವರದಿಗಳನ್ನು ನೋಡಿದ್ದೇವೆ. ಚೀನಾ ಇಂತಹ ಪ್ರಯತ್ನ ಮಾಡುತ್ತಿರುವುದು ಇದೇ ಮೊದಲಲ್ಲ. ನಾವು ಇದನ್ನು ಸಾರಾಸಗಟಾಗಿ ತಿರಸ್ಕರಿಸುತ್ತೇವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.
ಆವಿಷ್ಕಾರದ ಹೆಸರಿನಿಂದ ವಾಸ್ತವತೆ ಬದಲಾಗಲ್ಲ ಎಂದ ಭಾರತ”ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ. ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಈ ಹಿಂದೆ ಏಪ್ರಿಲ್ ೨೦೧೭ ರಲ್ಲಿ ಮತ್ತು ಡಿಸೆಂಬರ್ ೨೦೨೧ ರಲ್ಲಿ ಈ ರೀತಿ ಪ್ರಮಾಣೀಕೃತ ಭೌಗೋಳಿಕ ಹೆಸರುಗಳನ್ನು ಬದಲಾಯಿಸಿತ್ತು” ಎಂದಿದ್ದಾರೆ.
ಭಾರತ – ಚೀನಾ ಶಾಂತಿ ಮಾತುಕತೆ ಮೂಲಕ ಲಡಾಖ್ ಗಡಿ ಸಮಸ್ಯೆ ಪರಿಹರಿಸಿಕೊಳ್ಳಬೇಕು: ದಲೈ ಲಾಮಾಚೀನಾ ಹೇಳಿಕೆ : ಚೀನಾ ಕ್ಯಾಬಿನೆಟ್ ಸಂಬಂಧಿತ ನಿಯಮಗಳ ಅನುಸಾರ ಭೌಗೋಳಿಕ ಹೆಸರುಗಳ ನಿರ್ವಹಣೆ ಕುರಿತಾಗಿ ನಮ್ಮ ಸಚಿವಾಲಯವು ಸಂಬಂಧಿಸಿದ ಇಲಾಖೆಗಳೊಂದಿಗೆ ದಕ್ಷಿಣ ಟಿಬೆಟ್‌ನಲ್ಲಿ ಕೆಲವು ಭೌಗೋಳಿಕ ಹೆಸರುಗಳನ್ನು ಪ್ರಮಾಣೀಕರಿಸಿದೆ ಎಂದು ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿತ್ತು. ಆದ್ರೆ, ಇದನ್ನು ಭಾರತ ತಿರಸ್ಕರಿಸಿದೆ.