ಚೀನಾ ವಿರುದ್ಧ ಮಹುತಾ ಆಕ್ರೋಶ

ಆಕ್ಲೆಂಡ್ (ನ್ಯೂಜಿಲ್ಯಾಂಡ್), ಮಾ.೨೫- ದಕ್ಷಿಣ ಚೀನಾ ಸಮುದ್ರ ಮತ್ತು ತೈವಾನ್ ಜಲಸಂಧಿಯಲ್ಲಿನ ಉದ್ವಿಗ್ನತೆಯ ವಿಚಾರಕ್ಕೆ ಸಂಬಂಧಿಸಿದಂತೆ ನ್ಯೂಜಿಲೆಂಡ್ ವಿದೇಶಾಂಗ ವ್ಯವಹಾರಗಳ ಸಚಿವೆ ನಾನಿಯಾ ಮಹುತಾ ಅವರು ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವರ ಜೊತೆ ಶನಿವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಮಹುತಾ ಅವರು ಬುಧವಾರದಿಂದ ಚೀನಾದ ನಾಲ್ಕು ದಿನಗಳ ಪ್ರವಾಸ ಆರಂಭಿಸಿದ್ದು, ಶನಿವಾರ ಅಂತ್ಯಗೊಂಡಿದೆ. ಈ ಹಿನ್ನೆಲೆಯಲ್ಲಿ ಚೀನಾದಲ್ಲಿ ಯಾವ ವಿಚಾರದ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ಮಹುತಾ ಅವರು ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಇದು ೨೦೧೯ರ ಬಳಿಕ ಚೀನಾ ಪ್ರವಾಸ ನಡೆಸಿದ ಮೊದಲ ನ್ಯೂಜಿಲ್ಯಾಂಡ್ ಸಚಿವೆ ಕೂಡ ಆಗಿದ್ದಾರೆ. ಈ ಬಗ್ಗೆ ನ್ಯೂಜಿಲ್ಯಾಂಡ್ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ತನ್ನ ಹೇಳಿಕೆಯಲ್ಲಿ, ಕ್ಸಿನ್‌ಜಿಯಾಂಗ್‌ನಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿ ಮತ್ತು ಹಾಂಗ್‌ಕಾಂಗ್‌ನಲ್ಲಿ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳ ಹರಣದ ಬಗ್ಗೆ ನ್ಯೂಜಿಲೆಂಡ್ ಆಳವಾದ ಕಳವಳಗಳನ್ನು ಹೊಂದಿರುವ ಬಗ್ಗೆ ಚೀನಾಗೆ ತಿಳಿಸಿದ್ದೇನೆ. ದಕ್ಷಿಣ ಚೀನಾ ಸಮುದ್ರದಲ್ಲಿನ ಬೆಳವಣಿಗೆಗಳು ಮತ್ತು ತೈವಾನ್ ಜಲಸಂಧಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಗಳ ಬಗ್ಗೆ ನಾನಿಯಾ ಮಹುತಾ ಕಳವಳ ವ್ಯಕ್ತಪಡಿಸಿದ್ದಾರೆ. ಜಾಗತಿಕ ಶಾಂತಿ ಪರಿಸ್ಥಿತಿಯನ್ನು ಹದಗೆಡಿಸುತ್ತಿರುವ ಚೀನಾ ಹಾಗೂ ರಷ್ಯಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ ಎಂದು ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.