ಬಳ್ಳಾರಿ,ಮಾ.30- ಭಾರತ ಚುನಾವಣಾ ಆಯೋಗವು ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023 ರ ವೇಳಾ ಪಟ್ಟಿಯನ್ನು ಹೊರಡಿಸಿದ್ದು, ಅದರಂತೆ ತಕ್ಷಣದಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಚುನಾವಣೆ ಪ್ರಕ್ರಿಯೆಯಲ್ಲಿ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಕ್ರಿಯರಾಗಿರುವಂತೆ ಮತ್ತು ತಮ್ಮ ಅಧೀನದಲ್ಲಿ ಬರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ರಜೆಯನ್ನು ಮಂಜೂರು ಮಾಡುವಂತಿಲ್ಲ ಹಾಗೂ ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಅನುಮತಿಯಿಲ್ಲದೇ ಕೇಂದ್ರಸ್ಥಾನವನ್ನು ಬಿಡುವಂತಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ.