ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ-ಸಿಬ್ಬಂದಿಗಳು ಚಾಚು ತಪ್ಪದೇ ಕಾರ್ಯ ನಿರ್ವಹಿಸಿ:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ

ಬೀದರ: ಏ.2: ಲೋಕಸಭಾ ಚುನಾವಣೆ ಪಾರದರ್ಶಕವಾಗಿ, ನ್ಯಾಯ ಸಮ್ಮತವಾಗಿ ಚುನಾವಣೆ ಆಯೋಗದ ನಿಯಮಾನುಸಾರ ಜರುಗಿಸಲು ಜಿಲ್ಲಾಢಳಿತ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚಾಚು ತಪ್ಪದೇ ತಮಗೆ ವಹಿಸಿರುವ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಸೂಚಸಿದರು.
ಸೋಮವಾರದಂದು ಪೂಜ್ಯ ಡಾ|| ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಏರ್ಪಡಿಸಿದ ಸೆಕ್ಟರ್ ಅಧಿಕಾರಿ ಮತ್ತು ಮಾಸ್ಟರ್ ಟ್ರೇನರ್‍ಗಳಿಗೆ ಅU, ಗಿಗಿPಂಖಿ, ಃU ತರಬೇತಿ ನೀಡಿ ಮಾತನಾಡಿದ ಅವರು ಈಗಾಗಲೇ ಸೆಕ್ಟೆರ್ ಅಧಿಕಾರಿಗಳು ಮತ್ತು ಮಾಸ್ಟರ್ ಟ್ರೇನರ್‍ಗಳಿಗೆ ಕೈಪಿಡಿ ನೀಡಲಾಗಿದ್ದು, ಎಲ್ಲಾ ವಿಷಯಗಳನ್ನು ತಿಳಿದುಕೊಂಡು Pಖಔ, ಂPಖಔ ಗಳಿಗೆ ಮಾಹಿತಿ ನೀಡಬೇಕು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಚುನಾವಣಾ ತಹಶೀಲ್ದಾರ ಅಣ್ಣರಾವ ಪಾಟೀಲ್, ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲ್ದಾರರು ಹಾಗೂ ಮಾಸ್ಟರ್ ಟ್ರೇನರ್ ಸೇರಿಂದತೆ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.