
ಕಲಬುರಗಿ,ಮೇ.8:ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೇ 10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಚುನಾವಣೆ ಕಾರ್ಯಕ್ಕಾಗಿ ನಿಗಮದಿಂದ ಸುಮಾರು 1,650 ವಾಹನಗಳನ್ನು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ನೀಡಲಾಗಿದೆ.
ಆದ್ದರಿಂದ ಮೇ 9 ಹಾಗೂ 10 ರಂದು ನಿಗಮದ ವಾಹನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಇದಕ್ಕೆ ಸಹಕರಿಸಬೇಕು ಎಂದು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.