
ವಿಜಯಪುರ:ಎ.13: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಕಾರ್ಯ ಹಾಗೂ ಪ್ರಚಾರಕ್ಕೆ 18ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಚುನಾವಣೆ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಕೈಗೊಳ್ಳಲು ಕೋರಿದ ಹಿನ್ನಲೆಯಲ್ಲಿ ಮಕ್ಕಳು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಬಾಲಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.