ಚುನಾವಣಾ ಜಾಗೃತಿಗಾಗಿ ಕಾಲ್ನಡಿಗೆ ಜಾಥಾ

ಕಲಬುರಗಿ,ಮಾ.23-ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಭವಿಷ್ಯದ ಮತ್ತು ಯುವ ಮತದಾರರಿಗೆ ಮತದಾನದ ಪ್ರಾಮುಖ್ಯತೆ, ಜಾಗೃತಿ ಮತ್ತು ಅರಿವು ಮೂಡಿಸುವ ಉದ್ದೇಶದಿಂದ ಎನ್‍ಸಿಸಿ ಕೆಡೆಟ್, ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಗರದ ಎಸ್.ಬಿ.ಕಾಲೇಜು ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾವನ್ನು ಡಿಸಿಪಿ ಕನಿಕಾ ಸಿಕ್ರಿವಾಲ್ ಉದ್ಘಾಟಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವಿಪ್ ಸಮಿತಿ ಅಧ್ಯಕ್ಷ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಪಾಟೀಲ ಭುವನೇಶ ದೇವಿದಾಸ, ಉಪ ಆಯುಕ್ತ ಮಾಧವ ಗಿಟ್ಟಿ, ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ರಾಮಕೃಷ್ಣ ರೆಡ್ಡಿ, ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ದಶರಥ ಮೇತ್ರೆ, ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ)ದ ಪ್ರಾಂಶುಪಾಲರಾದ ಡಾ.ಸವಿತಾ ತಿವಾರಿ ಸೇರಿದಂತೆ ಮತ್ತಿತರರು ಇದ್ದರು.