
ರಾಯಚೂರು: ಮೇ 10 ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಸಿಬ್ಬಂಧಿಗಳಿಗೆ ತರಬೇತಿ ನೀಡಲಾಗುತ್ತಿದೆ. ತರಭೇತಿಗೆ ಹಾಜರಾಗುವುದು ಚುನಾವಣಾ ಕರ್ತವ್ಯ ಆಗಿದ್ದು, ಮೇ 7 ರಂದು ಎಲ್ಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಂತಿಮ ತರಬೇತಿ ನಡೆಯಲಿದೆ.
ನಿಯೋಜಿತ ಅಧಿಕಾರಿ ಮತ್ತು ಸಿಬ್ಬಂಧಿಗಳು ಈ ತರಬೇತಿಗೆ ಹಾಜರಾಗುವುದು ಕಡ್ಡಾಯವಾಗಿದೆ. ಯಾವುದೇ ಅಧಿಕಾರಿ, ಸಿಬ್ಬಂಧಿಗಳು ಈ ತರಬೇತಿಗೆ ಗೈರುಹಾಜರಾದರೆ ಅಂತಹವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಿ ಮತ್ತು ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಯಚೂರು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.