ಚುನಾವಣಾ ನೀತಿ ಸಂಹಿತೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಶ್ರಮಿಸಬೇಕು: ಕೆ.ವಿ ರಾಜೇಂದ್ರ

ಮೈಸೂರು: ಮಾ.07:- ಜಿಲ್ಲೆಯಲ್ಲಿ ನ್ಯಾಯಯುತ ಮತ್ತು ಶಾಂತಿಯುತ ಚುನಾವಣೆಯನ್ನು ಹೊಂದಲು ಚುನಾವಣಾ ನೀತಿ ಸಂಹಿತೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ರ ಸಂಬಔಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ನೆರೆಯ ಕೇರಳ ರಾಜ್ಯದ ವೈನಾಡು ಜಿಲ್ಲೆಯ ಜಿಲ್ಲಾಧಿಕಾರಿಗಳು ಜಿಲ್ಲಾ ವರಿಷ್ಠಾಧಿಕಾರಿಗಳು, ಅಬಕಾರಿ ಇಲಾಖೆ ಆಯುಕ್ತರು ಹಾಗೂ ಇತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಜಂಟಿ ಸಮನ್ವಯ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣೆಯನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವ ಸಂಬಔಧ ಅಕ್ರಮ ಮದ್ಯ ತಯಾರಿಕೆ, ಶೇಖರಣೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ಹೊರ ರಾಜ್ಯಗಳಿಂದ ಲಿಕ್ಕರ್ ಸರಬರಾಜು ಆಗದಂತೆ ನೋಡಿಕೊಳ್ಳಬೇಕು. ಚುನಾವಣಾ ಸಂದರ್ಭದಲ್ಲಿ ಯಾವುದೇ ರೀತಿಯ ಸರಕುಗಳು ಅಕ್ರಮ ಸಾಗಾಣಿಕೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಮೈಸೂರು ಜಿಲ್ಲೆಯು ಕೇರಳ ರಾಜ್ಯದೊಂದಿಗೆ ಗಡಿ ಪ್ರದೇಶವನ್ನು ಹೊಂದಿದೆ. ಗಡಿ ಭಾಗದಲ್ಲಿ ಚೆಕ್ ಪೆÇೀಸ್ಟ್ ಗಳನ್ನು ಗುರುತಿಸಲಾಗಿದ್ದು, ಇದಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಗಡಿ ಭಾಗಗಳ ಚೆಕ್ ಪೆÇೀಸ್ಟ್ ಗಳಲ್ಲಿ ರಾಜ್ಯಕ್ಕೆ ಬರುವ ಹಾಗೂ ಇಲ್ಲಿಂದ ಹೊರ ಹೋಗುವ ವಾಹನಗಳ ಮೇಲೆ ನಿಗಾ ಇಡಬೇಕಾಗುತ್ತದೆ. ಇದಕ್ಕಾಗಿ ಗಡಿ ಭಾಗದ ರಾಜ್ಯಗಳ ಗಡಿ ಜಿಲ್ಲೆಗಳಿಂದಲೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುವಂತೆ ಅವರು ಸೂಚಿಸಿದರು.
ಚೆಕ್ ಪೆÇೀಸ್ಟ್ ಗಳಲ್ಲಿ 24*7 ಅವಧಿಯಲ್ಲಿಯೂ ಕಾರ್ಯ ನಿರ್ವಹಿಸಬೇಕಾಗುತ್ತದೆ. ಜಿಲ್ಲೆಯಿಂದ ನಿಯೋಜಿಸಲಾದ ನೋಡಲ್ ಅಧಿಕಾರಿಗಳೊಂದಿಗೆ ಹೊರ ಜಿಲ್ಲೆಗಳ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ಕೈಗೊಳ್ಳಬೇಕಾಗುತ್ತದೆ. ನೇಮಕ ಮಾಡಲಾಗುವ ಹೊರ ಜಿಲ್ಲೆಗಳ ಅಧಿಕಾರಿಗಳ ಮಾಹಿತಿಯನ್ನು ಜಿಲ್ಲಾಡಳಿತ ಪೆÇಲೀಸ್, ಅಬಕಾರಿ ಇಲಾಖೆಗಳ ಕಚೇರಿಗೆ ಸಲ್ಲಿಸಬೇಕು ಎಂದರು.
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು, ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕಾಗುತ್ತದೆ. ಮತದಾನದ ಅವಧಿಯಲ್ಲಿ ಚೆಕ್‍ಪೆÇೀಸ್ಟ್ನ ಕರ್ತವ್ಯ ನಿರತ ಅಧಿಕಾರಿಗಳು ಅತ್ಯಂತ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ಸಂಬಔಧ ಎಲ್ಲಾ ಸಹಕಾರ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೆÇಲೀಸ್ ಆಯುಕ್ತರಾದ ನಂದಿನಿ, ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜರಾಂ ಹಾಗೂ ಕೇರಳ ರಾಜ್ಯದ ವೈನಾಡು ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೆÇಲೀಸ್, ಅಬಕಾರಿ, ಅರಣ್ಯ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.