ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಕನಕದಾಸ ಜಯಂತಿ ಆಚರಣೆ

ವಿಜಯಪುರ, ನ.24-ಕೋವಿಡ್-19 ಹಾಗೂ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕನಕದಾಸ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್‍ಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದರೆಡ್ಡಿ ಹಾಗೂ ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ ಸೇರಿದಂತೆ ಗಣ್ಯರು ಮಹಾನುಭಾವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಜ್ಯೋತಿ ಬೆಳಗಿಸುವ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪೆÇಲೀಸ್ ಅಧಿಕಾರಿ ಶ್ರೀಲಕ್ಷ್ಮೀನಾರಾಯಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಈರಪ್ಪ ಆಶಾಪುರ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ರಾಜು ಕಂಬಾಗಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸುಜಾತ ಕಳ್ಳಿಮನಿ, ಪ್ರಕಾಶ ಜಾಲಗೇರಿ, ಸೋಮಶೇಖರ ಮಹಾಸ್ವಾಮಿಗಳು, ಮಾಳಿಂಗರಾಯ ಮಹಾರಾಜರು, ಮೋಹನ ಮೇಟಿ, ಮೋಹನ ದಳವಾಯಿ, ಪರಮೇಶ್ವರ್, ಮಲ್ಲು ಬಿದರಿ, ದೇವಕಾಂತ ಬಿಜ್ಜರಗಿ, ಸಿ.ಕೆ ಬಗಲಿ, ಅಡಿವೆಪ್ಪ ಸಾಲಗಲ್, ಸಿದ್ದಾರ್ಥ್, ಸಿದ್ದು ರಾಯಣ್ಣನವರ, ಸೋಮನಗೌಡ ಕಲ್ಲೂರ್, ಭೀಮರಾಯ ಜಿಗಜಿಣಗಿ, ವಿದ್ಯಾವತಿ ಅಂಕಲಗಿ, ದೇವೇಂದ್ರ ಮೀರೇಕರ್, ಸುರೇಶ್ ಬಬಲೇಶ್ವರ, ರವಿ ಕಿತ್ತೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.