ವಿಜಯಪುರ, ಏ.05: ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಚುನಾವಣಾ ಪ್ರಕ್ರಿಯೆ ಅತ್ಯಂತ ಮಹತ್ವದ್ದಾಗಿರುವುದರಿಂದ ಲೋಪಗಳಿಗೆ ಇಲ್ಲಿ ಯಾವುದೇ ಅವಕಾಶಗಳಿರುವುದಿಲ್ಲ. ಹೀಗಾಗಿ ಚುನಾವಣೆಗೆ ನಿಯೋಜಿತ ಎಲ್ಲ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಗಳಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ನÀಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಮಂಗಳವಾರ ಸಂಜೆ ಜಿಲ್ಲೆಯ ವಿವಿಧ ಮತಕ್ಷೇತ್ರದ ಚುನಾವಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಜಿಲ್ಲೆಯ ಎಲ್ಲ ತಹಶೀಲ್ದಾರಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಚುನಾವಣಾ ಪ್ರಕ್ರಿಯೆಯಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಚುನಾವಣಾದಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಸೇರಿದಂತೆ ಚುನಾವಣೆಗೆ ನಿಯೋಜಿತ ಎಲ್ಲ ಅಧಿಕಾರಿಗಳ ಕಾರ್ಯ ಮಹತ್ವದ್ದಾಗಿದೆ. ವ್ಯವಸ್ಥಿತವಾಗಿ ಹಾಗೂ ಚುನಾವಣಾ ನಿಯಮಗಳನ್ನು ಪಾಲಿಸಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.
ಮಾದರಿ ನೀತಿ ಸಂಹಿತೆ ದೂರುಗಳ ಸಲ್ಲಿಕೆಗೆ ಇರುವ ಸಿವಿಜಿಲ್ ಆಪ್ ಕುರಿತು ಸಾರ್ವಜನಿಕರಲ್ಲಿ ಪ್ರಾತ್ಯಕ್ಷಿಕೆಯ ಮೂಲಕ ಜಾಗೃತಿ ಮೂಡಿಸಬೇಕು. ಸಿವಿಜಿಲ್ ಆ???ನಲ್ಲಿ ದಾಖಲಾಗುವ ದೂರುಗಳಿಗೆ ತಕ್ಷಣ ಸ್ಪಂದಿಸಿ, ಸಮಸ್ಯೆಗೆ ಪರಿಹಾರ ಒದಗಿಸಬೇಕು. ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು ಯಾವುದೇ ಸ್ಥಳಗಳಲ್ಲಿ ಫೆÇೀಸ್ಟರ್ ಬ್ಯಾನ???ಗಳು ಇರದಂತೆ ನೋಡಿಕೊಳ್ಳಬೇಕು. ಯಾವುದೇ ಸ್ಥಳಗಳಲ್ಲಿ ಉಳಿದುಕೊಂಡಿದ್ದರೆ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನೆ ಹೊಣೆಗಾರನ್ನಾಗಿಸಲಾಗುವುದು ಎಂದು ಹೇಳಿದರು.
ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು (ಎಂಸಿಎಂಸಿ) ಸಮಿತಿ ಪ್ರಮಾಣೀಕರಿಸುವ ವಿವಿಧ ರಾಜಕೀಯ ಪಕ್ಷಗಳ ದೃಶ್ಯ ಚಿತ್ರ (ಆಡಿಯೋ ವಿಜುವಲ್), ಚುನಾವಣಾ ನಿಯಮದಂತೆ ಪ್ರಮಾಣಿಕರಿಸಿ ನೀಡಬೇಕು. ದೃಶ್ಯ ಚಿತ್ರ ವಾಹನಗಳ ಪರವಾನಿಗೆ, ಧ್ವನಿ ವರ್ಧಕ ಪರವಾನಿಗೆ ನೀಡುವ ಸಂದರ್ಭದಲ್ಲಿ ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಗೆ ಮಾತ್ರ ಒಂದು ಸ್ಥಳದಲ್ಲಿ 30 ನಿಮಿಷಕ್ಕೂ ಹೆಚ್ಚಿನ ಅವಧಿಯಲ್ಲಿ ನಿಲ್ಲದಂತೆ ಷರತ್ತು ವಿಧಿಸಿ, ಕೋವಿಡ್ ನಿಯಮಗಳನ್ನು ಪಾಲಿಸುವುದರೊಂದಿಗೆ ವಾಹನಗಳು ಸಂಚರಿಸುವ ಮಾರ್ಗಗಳನ್ನು ನಿಗದಿಗೊಳಿಸಿ ಯಾವುದೇ ಚುನಾವಣಾ ನಿಯಮ ಉಲ್ಲಂಘನೆಯಾಗದಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಸಿಗಾಗಿ ಸುದ್ದಿಗಳ ಮೇಲೆ ತಿವ್ರ ನಿಗಾ ಇರಿಸಬೇಕು. ವಿವಿಧ ರಾಜಕೀಯ ಪಕ್ಷಗಳು ವಿದ್ಯುನ್ಮಾನ ಹಾಗೂ ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಣೆಯ ಮುನ್ನ ಪರವಾನಿಗೆ ಹೊಂದಿರಬೇಕು. ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿವಾಗುವ ಸುದ್ದಿ ಮೇಲೆ ನಿಗಾ ಇಟ್ಟು ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು.
ರಾತ್ರಿ 10 ಗಂಟೆ ನಂತರ ಮನರಂಜನೆ ಕಾರ್ಯಕ್ರಮ ಏರ್ಪಡಿಸದಂತೆ ಎಲ್ಲ ಮತಗಟ್ಟೆಗಳ ವ್ಯಾಪ್ತಿಯ ಅಧಿಕಾರಿಗಳು ಜಾಗೃತ ವಹಿಸಬೇಕು.ಯಾವುದೇ ಚುನಾವಣಾ ಉಲ್ಲಂಘನೆ ಪ್ರಕರಣಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯ ಎಲ್ಲ ಆ???ಓಗಳು ಸಮನ್ವಯತೆ ಸಾಧಿಸಿಕೊಂಡು ಉದ್ಭವಿಸುವ ಗೊಂದಲವನ್ನು ಬಗೆಹರಿಸಿಕೊಳ್ಳಬೇಕು. ಯೋಜನಾ ಬದ್ಧವಾಗಿ ಕಾರ್ಯನಿರ್ವಹಿಸಬೇಕು,. ಜಿಲ್ಲೆಯ ಚುನಾವಣಾಧಿಕಾರಿಗಳು ಸಿ-ವ್ಹಿಜಿಲ್ ಹಾಗೂ ಸುವಿಧಾ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ತಂತ್ರಾಂಶ ಕಾರ್ಯನಿರ್ವಹಿಸುವ ವಿಧಾನ ಕುರಿತು ತಿಳಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಅತ್ಯಂತ ಮಹತ್ವ ಪೂರ್ಣವಾಗಿದ್ದು, ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ಜರುಗಿಸಲು ಪ್ರತಿಯೊಬ್ಬ ನಾಗರೀಕರಲ್ಲಿ ಚುನಾವಣೆಗೆ ಸಂಬಂಧಿಸಿದ ದೂರುಗಳ ಪರಿಹಾರಕ್ಕಾಗಿರುವ ಸಿವ್ಹಿಜಿಲ್ ಹಾಗೂ ಸುವಿಧಾ ಕುರಿತು ಜಾಗೃತಿ ಮೂಡಿಸಿ ಅತಿ ಹೆಚ್ಚಿನ ಜನರು ಈ ತಂತ್ರಾಂಶಗಳ ಬಳಕೆಗೆ ಜನರನ್ನು ಪ್ರೇರೆಪಿಸಬೇಕು ಎಂದು ಹೇಳಿದರು.
ಬ್ಯಾಲೆಟ್ ಪೇಪರ್, ಮತದಾನ ಕೇಂದ್ರ, ನಾಮಪತ್ರಗಳ ಸರಿಯಾದ ಪರಿಶೀಲನೆ, ಒಟ್ಟಾರೆ ಚುನಾವಣಾ ಕಾರ್ಯಗಳು ಕುರಿತು ಯಾವುದೇ ಗೊಂದಕ್ಕೊಳಗಾಗದೇ ಆಯೋಗದ ನಿಯಮಗಳನ್ನು ಪಾಲಿಸಿಕೊಂಡು ಪಾರದರ್ಶಕ, ನ್ಯಾಯಸಮ್ಮತ ಶಾಂತಿಯುತ ಚುನಾವಣೆಗೆ ನಡೆಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಅಬಕಾರಿ ಇಲಾಖೆ ಉಪ ಆಯುಕ್ತ ಶಿವಲಿಂಗಪ್ಪ ಬನಹಟ್ಟಿ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಇಂಡಿ ಉಪವಿಭಾಗಾಧಿಕಾರಿ ರಾಮಚಂದ್ರ ಗಡದೆ, ಸೇರಿದಂತೆ ಜಿಲ್ಲೆಯ ಎಲ್ಲ ತಹಶೀಲ್ದಾರರು, ಚುನಾವಣಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.