
ಬೆಂಗಳೂರು.ಏ೭: ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಸುದೀಪ್ ಘೋಷಣೆ ಮಾಡಿದ ಬೆನ್ನಲ್ಲೇ ನಟ ರಾಕಿಂಗ್ ಸ್ಟಾರ್ ಯಶ್ ಅವರನ್ನು ಚುನಾವಣಾ ಪ್ರಚಾರಕ್ಕೆ ಕರೆತರಲು ರಾಜಕೀಯ ಮುಖಂಡರು ಸಂಪರ್ಕ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು, ಸ್ಟಾರ್ ಪ್ರಚಾರಕರನ್ನು ಕರೆತಂದು ಮತದಾರರ ಸೆಳೆಯುವ ಪ್ರಯತ್ನ ಮಾಡುತ್ತಿರುವ ರಾಜಕೀಯ ಪಕ್ಷಗಳು ನಟ ಯಶ್ ಮನೆಯ ಬಾಗಿಲು ಕೂಡ ತಟ್ಟಿದ್ದಾರೆ ಎನ್ನಲಾಗಿದೆ.ಆದರೆ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿರುವ ನಟ ಯಶ್ ಇದಕ್ಕೆ ನೋ ಎಂದಿದ್ದಾರೆ ಎನ್ನಲಾಗಿದೆ. ಅಲ್ಲದೇ ಯಾವ ಪಕ್ಷದ ಪರ ಕೂಡ ಕೆಲಸ ಮಾಡಲ್ಲ, ನಾನು ಸಿನಿಮಾದಲ್ಲಿ ಬ್ಯುಸಿಯಾಗಿದ್ದೇನೆ ಎಂಬ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.
ಕೆಜಿಎಫ್ ಸಿನಿಮಾದ ಬಳಿಕ ನಟ ಯಶ್ ಖ್ಯಾತಿ ಇನ್ನಷ್ಟು ಎತ್ತರಕ್ಕೆ ಬೆಳೆದಿದ್ದು, ಈಗಾಗಲೇ ಹಲವು ರಾಜಕೀಯ ನಾಯಕರು ಯಶ್ ಅವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ. ಯಶ್ ಅವರ ಜನಪ್ರಿಯತೆಯನ್ನು ಬಳಸಿಕೊಂಡು ವೋಟು ಗಿಟ್ಟಿಸಿಕೊಳ್ಳುವ ತಂತ್ರ ನಡೆದಿದೆ . ಆದರೆ ಯಶ್ ಯಾರ ಪರ ಕೂಡವೂ ಪ್ರಚಾರ ಮಾಡುತ್ತಿಲ್ಲ ಎಂದು ಹೇಳಿದ್ದಾರೆ ಎಂದು ಮೂಲಗಳು ಹೇಳಿದೆ. ೨೦೧೯ ರ ಲೋಕಸಭೆ ಚುನಾವಣೆಯಲ್ಲಿ ನಟ ಯಶ್ ಸುಮಲತಾ ಪರ ಪ್ರಚಾರ ನಡೆಸಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದರು. ಸುಮಲತಾ ಗೆಲ್ಲೋಕೆ ಇದು ಕೂಡ ಪ್ಲಸ್ ಪಾಯಿಂಟ್ ಆಗಿತ್ತು.