ಚುನಾವಣಾ ಪ್ರಚಾರ ಕಾರ್ಯಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳಬೇಡಿ: ಗೋವಿಂದರೆಡ್ಡಿ

ಬೀದರ, ಏ.5: ಚುನಾವಣಾ ಕಾರ್ಯಗಳಲ್ಲಿ ಅಥವಾ ಚುನವಣಾ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿಸಲಾಗಿದೆ ಎಂದು ಬೀದರ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತ ಸರ್ಕಾರ ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಓಡಂಬಡಿಕೆಗೆ 11 ಡಿಸೆಂಬರ್ 1992ರಲ್ಲಿ ಒಪ್ಪಿ ಅನುಮೋದಿಸಿರುತ್ತದೆ. ಈ ಮಕ್ಕಳ ಹಕ್ಕುಗಳ ಓಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೆÇೀಷಣೆ ಮತ್ತು ರಕ್ಷಣೆ ಕಾಯ್ದೆ)-2015 ಹಾಗೂ ತಿದ್ದುಪಡಿ ಕಾಯ್ದೆ 2021ರನ್ವಯ 18ವರ್ಷದೊಳಗಿನ ಎಲ್ಲಾ ಮಾನವ ಜೀವಿಗಳು ಮಕ್ಕಳು ಎಂದು ಪರಿಗಣಿಸಲಾಗಿದೆ. ಮಕ್ಕಳ ಹಕ್ಕುಗಳ ಓಡಂಬಡಿಕೆಯ ಕಲಂ 32 ಮತ್ತು 36ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಆಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯನಿರ್ವಹಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದೆ.
ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986 ಹಾಗೂ ನಿದ್ದುಪಡಿ ಕಾಯ್ದೆ-2016 ಕಾಯ್ದೆಯನ್ನು 14ವರ್ಷದೊಳ್ಳಗಿನ ಮಕ್ಕಳು ಯಾವುದೇ ದುಡಿಮೆ ಕಾರ್ಯದಲ್ಲಿ ಅಥವಾ ದುಡಿಮೆ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿದೆ. ಮತ್ತು 18 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವದನ್ನು ನಿಷೇಧಿಸಿದೆ. ಒಂದು ವೇಳೆ ಈ ಕಾಯ್ದೆಯನ್ನು ಉಲ್ಲಂಘಿಸಿ ಮಕ್ಕಳನ್ನು ಕೆಲಸ ಅಥವಾ ಇನ್ನಾವುದೇ ಕಾರ್ಯಗಳಲ್ಲಿ ನೇಮಿಸಿಕೊಂಡಲ್ಲಿ ಕಲಂ 14ರಡಿಯಲ್ಲಿ 2 ವರ್ಷಗಳಿಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು 50,000 ರೂ.ಗಳ ದಂಡವನ್ನು ವಿಧಿಸಬಹುದಾಗಿದೆ.
ಎಲ್ಲಾ ಅಧಿಕಾರಿಗಳಿಗೆ, ಚುನಾವಣಾ ಜಾಗೃತ ದಳಗಳಿಗೆ ರಾಜಕೀಯ ಪಕ್ಷಗಳ ಮುಖಂಡರುಗಳಿಗೆ ಹಾಗೂ ಸಾರ್ವಜನಿಕರಿಗೆ ಪ್ರತಿಕಾ ಪ್ರಟಣೆಯ ಮೂಲಕ ತಿಳಿಸುವುದೆನೆಂದರೆ ಯಾವುದೇ ಚುನಾವಣಾ ಕಾರ್ಯಗಳಲ್ಲಿ ಹಾಗೂ ಯಾವುದೇ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಈ ಕಾಯ್ದೆಗಳನ್ವಯ ಕಾನೂನು ರೀತ್ಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಬೀದರ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.