ಚುನಾವಣಾ ಪ್ರಣಾಳಿಕೆ ಅನ್ವಯ ರಾಜ್ಯ ಶಿಕ್ಷಣನೀತಿ ಜಾರಿ

ಕಲಬುರಗಿ,ಜೂ 19:ರಾಜ್ಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈಬಿಟ್ಟು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಅನ್ವಯ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.
ಇಲ್ಲಿನ ಗುಲ್ಬರ್ಗ ವಿವಿಯ ಕೈಲಾಸ ಭವನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಈ ನಿಟ್ಟಿನಲ್ಲಿ ತಜ್ಞರೊಂದಿಗೆ ಪರಾಮರ್ಶೆ ನಡೆಸಲಾಗುತ್ತಿದೆ ಎಂದರು.
ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಇಷ್ಟರಲ್ಲೇ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಸಹ ಸಚಿವ ಸುಧಾಕರ್ ನುಡಿದರು.
ರಾಜ್ಯದಲ್ಲಿ 15 ಸಾವಿರ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇದರ ಜೊತೆಗೆ ಈ ಹಿಂದಿನ ರಾಜ್ಯ ಸರಕಾರ ರಾಜ್ಯದಲ್ಲಿ ಏಳು ಹೊಸ ವಿವಿಗಳನ್ನು ಆರಂಭಿಸಿದೆ. ಹೀಗಾಗಿ, ಈಗ ರಾಜ್ಯದಲ್ಲಿ 32 ವಿವಿಗಳು ಕಾರ್ಯನಿರ್ವಹಿಸುತ್ತಿವೆ. ರಾಜ್ಯದ ಮುಂಗಡ ಪತ್ರದಲ್ಲಿ ಶೇ.1.7ರಷ್ಟು ಮಾತ್ರ ಅನುದಾನ ನೀಡಲಾಗುತ್ತಿದೆ. ಮುಂಬರುವ ಆಯವ್ಯಯ ಪತ್ರದಲ್ಲಿ ಅನುದಾನ ಹೆಚ್ಚಳ ಆಗುವ ವಿಶ್ವಾಸವಿದೆ ಎಂದರು.
ಗುಲ್ಬರ್ಗ ವಿಶ್ವವಿದ್ಯಾಲಯದ ಉಪಕುಲಪತಿ ಪೆÇ್ರ.ದಯಾನಂದ ಅಗಸರ್ ಇದ್ದರು.