ಚುನಾವಣಾ ಬಾಂಡ್ ಮೋದಿ ನೈತಿಕತೆ ಬಯಲು

ಬೆಂಗಳೂರು:ಮಾ೧೮ ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿಬಿದ್ದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೋದಿಯವರು “ನಾನೂ ತಿನ್ನುವುದಿಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ” ಎಂದು ಹೇಳಿಕೊಳ್ಳುತ್ತಾ ಹುಸಿ ವರ್ಚಸ್ಸು ಸೃಷ್ಟಿಸಿಕೊಂಡಿದ್ದರು. ಆ ಹುಸಿ ವರ್ಚಸ್ಸಿಗೆ ಈಗ ಸರಿಯಾದ ಹೊಡೆತ ಬಿದ್ದಿದೆ ಎಂದರು
ಹೆಚ್ಚಿನ ಸಂದರ್ಭಗಳಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಳಿಗೆ ಒಳಗಾದ ನಂತರ ಅಥವಾ ಗುತ್ತಿಗೆಗಳನ್ನು ಪಡೆದ ನಂತರ ಬಿಜೆಪಿ ಹೆಸರಲ್ಲಿ ಚುನಾವಣಾ ಬಾಂಡ್ ತೆಗೆದುಕೊಂಡಿರುವುದು ಬಹಿರಂಗಗೊಂಡಿದೆ. ಇದರಿಂದಾಗಿ, ಭ್ರಷ್ಟಾಚಾರ, ನೈತಿಕತೆಯ ಬಗ್ಗೆ ಪ್ರಸ್ತಾಪಿಸುತ್ತಿದ್ದ ಮೋದಿ ಅವರ ನಿಜವಾದ ಬಣ್ಣ ಏನು ಎಂಬುದು ಗೊತ್ತಾಗಿದೆ ಎಂದು ವ್ಯಂಗ್ಯವಾಡಿದರು.