ಯಾದಗಿರಿ : ಏ.28 : ಚುನಾವಣಾ ಮಾರ್ಗಸೂಚಿಯಂತೆ ನಿಯೋಜಿತ ಸೆಕ್ಟರ್ ಅಧಿಕಾರಿಗಳು ತಮಗೆ ವಹಿಸಿದ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು ಯಾದಗಿರಿ ಮತ್ತು ಗುರುಮಠಕಲ್ ವಿಧಾನಸಭಾ ಕ್ಷೇತ್ರಗಳ ಸಾಮಾನ್ಯ ವೀಕ್ಷಕರಾದ ಡಾ.ಎಮ್.ಹರಿ ಜವಾಹರಲಾಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಯಾದಗಿರಿ ಮತ್ತು ಗುರುಮಠಕಲ್ ವಿಧಾನಸಭಾ ಕ್ಷೇತ್ರಗಳ ಸೆಕ್ಟರ್ ಅಧಿಕಾರಿಗಳು ಮತ್ತು ಪೆÇಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಸೆಕ್ಟರ್ ಅಧಿಕಾರಿಗಳಿಗೆ ಮತಗಟ್ಟೆ ವ್ಯಾಪ್ತಿ ಸೇರಿದಂತೆ ಸಿಬ್ಬಂದಿ, ಮತಗಟ್ಟೆಯಲ್ಲಿನ ಮೂಲಸೌಕರ್ಯ ಹಾಗೂ ಚುನಾವಣೆಯ ಎಲ್ಲಾ ಮಾಹಿತಿ ಪಡೆದುಕೊಂಡು ಮತಗಟ್ಟೆಯ ಎಲ್ಲ ಸಿಬ್ಬಂದಿಗೆ ಸೆಕ್ಟರ್ ಅಧಿಕಾರಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಬೇಕು ಎಂದರು.
ಸಾಮಾಜಿಕ ಜಾಲತಾಣಗಳ ಬಗ್ಗೆ ವಿಶೇಷ ಗಮನ ನೀಡಬೇಕು. ಕಾನೂನು ಸುವ್ಯವಸ್ಥೆಗೆ ಅವಶ್ಯಕ ಕ್ರಮಗಳ ಜೊತೆಗೆ ಚುನಾವಣೆಗಾಗಿ ನಿಯೋಜಿಸಿದ ತಂಡಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ವಿ.ವಿ.ಪ್ಯಾಟ್‍ಗಳ ಅವಶ್ಯಕ ಹಾಗೂ ಶಿಸ್ತುಬದ್ಧ ನಿರ್ವಹಣೆಗೆ ವಿಶೇಷ ಗಮನ ನೀಡಬೇಕು. ಒಟ್ಟಾರೆ ಅಚ್ಚುಕಟ್ಟಾದ ಯೋಜನೆಯೊಂದಿಗೆ ಮುಂಬರುವ ಚುನಾವಣೆ ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮಾತನಾಡಿ : ಯಾವುದೇ ಕಾರಣಕ್ಕೂ ಮತದಾನ ಕೇಂದ್ರಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿ ಎಲ್ಲರೂ ಚುರುಕಾಗಿ ಕಾರ್ಯನಿರ್ವಹಿಸಬೇಕು. ಮತದಾರರು ಮತದಾನ ಕೇಂದ್ರಕ್ಕೆ ಬರುವಾಗ ಅನಾನುಕೂಲತೆ ಉಂಟಾಗದಂತೆ ನೋಡಿಕೊಳ್ಳಬೇಕು.
ಚುನಾವಣೆ ಸೌಕರ್ಯ ಹಾಗೂ ವ್ಯವಸ್ಥೆ ಉಪಯೋಗಿಸಿಕೊಂಡು ಯಶಸ್ವಿಯಾಗಿ ಶಾಂತಿಯುತ ಮತ್ತು ಪಾರದರ್ಶಕವಾಗಿ ಚುನಾವಣೆ ನಡೆಯಲು ಸೆಕ್ಟರ್ ಅಧಿಕಾರಿಗಳ ಪಾತ್ರ ಬಹುಮುಖ್ಯವಾಗಿದೆ. ಆದ್ದರಿಂದ ಯಾವುದೇ ಹಂತದಲ್ಲೂ ನಿರ್ಲಕ್ಷ್ಯ ವಹಿಸದೆ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ವೋಟರ್ ಸ್ಲಿಪ್‍ಗಳನ್ನು ಮತದಾನ ನಡೆಯುವ ಮುಂಚಿತ ದಿನಗಳಲ್ಲಿಯೇ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಶಾ ಆಲಂ ಹುಸೇನ್ ಹಾಗೂ ಯಾದಗಿರಿ ಮತ್ತು ಗುರುಮಠಕಲ್ ವಿಧಾನಸಭಾ ಕ್ಷೇತ್ರಗಳ ಸೆಕ್ಟರ್ ಅಧಿಕಾರಿಗಳು ಮತ್ತು ಪೆÇಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.