ಚುನಾವಣಾ ವೀಕ್ಷಕರ ಭೇಟಿ, ಅಧಿಕಾರಿಗಳ ಜೊತೆ ಸಭೆ

ಗದಗ,ಏ24: ಲೋಕಸಭಾ ಸಾರ್ವತ್ರಿಕ ಚುನಾವಣಾ ಹಿನ್ನಲೆ ಬಾಗಲಕೋಟೆ ಲೋಕಸಭಾ ಕ್ಷೇತ್ರದ ನರಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಸಂಬಂಧ ಚುನಾವಣಾ ಸಾಮಾನ್ಯ ವೀಕ್ಷಕರಾದ ಇ. ಶರವಣ ವೆಲ್‍ರಾಜ್ ಐಎಎಸ್, ಪೆÇಲೀಸ್ ವೀಕ್ಷಕರಾದ ಎಂ.ಆರ್ಶಿ ಐಪಿಎಸ್, ವೆಚ್ಚ ವೀಕ್ಷಕರಾದ ಇಪ್ತಿಕಾರ್ ಅಹಮ್ಮದ್ ಐಆರೆಸ್ ಅವರು ಲೋಕಸಭಾ ಚುನಾವಣಾ ಸಿದ್ಧತೆ ಸಂಬಂಧಿಸಿದಂತೆ ಮಾಹಿತಿ ಪಡೆದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ನಿಯಂತ್ರಣ ಕೊಠಡಿ ವೀಕ್ಷಿಸಿದ ನಂತರ ನಡೆದ ಸಭೆಯಲ್ಲಿ ಮಾತನಾಡಿದ ಸಾಮಾನ್ಯ ವೀಕ್ಷಕರಾದ ಶರವಣ ವೆಲ್‍ರಾಜ್ ಅವರು ನರುಗುಂದ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ವಿವರ, ಯುವ ಮತದಾರರ ಸಂಖ್ಯೆ, ಮತಗಟ್ಟೆಗಳ ವಿವರ, ಅಂಚೆ ಮತಪತ್ರ, ವಿದ್ಯುನ್ಮಾನ ಮತಯಂತ್ರ, ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಸೇರಿದಂತೆ ಹಲವು ಮಾಹಿತಿ ಪಡೆದರು.
ಪೆÇಲೀಸ್ ವೀಕ್ಷಕರಾದ ಎಂ.ಆರ್ಸಿ ಅವರು ಲೋಕಸಭಾ ಚುನಾವಣೆಯನ್ನು ನಿಷ್ಪಕ್ಷಪಾತ ಮತ್ತು ಶಾಂತಿಯುತ ನಡೆಸಬೇಕು ಎಂದು ಹೇಳಿದರು.
ಮತಗಟ್ಟೆ ಕೇಂದ್ರಗಳಲ್ಲಿ ವಿದ್ಯುತ್, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಸಬೇಕೆಂದು ಸೂಚಿಸಿದರು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ನರುಗುಂದ ವಿಧಾನಸಭಾ ಕ್ಷೇತ್ರದಲ್ಲಿನ ಮತದಾರರ ಸಂಖ್ಯೆ, ಯುವದಾರರ ಸಂಖ್ಯೆ, ಮತಗಟ್ಟೆ ವಿವರ, ವಿದ್ಯುನ್ಮಾನ ಮತಯಂತ್ರ, ಭದ್ರತಾ ಕೊಠಡಿ, ಮತಗಟ್ಟೆ ಅಧಿಕಾರಿಗಳ ನಿಯೋಜನೆ, ಮೈಕ್ರೋ ವೀಕ್ಷಕರ ನೇಮಕ, ಅಂಚೆ ಮತದಾನ ಸೇರಿದಂತೆ ಲೋಕಸಭಾ ಚುನಾವಣೆ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಅವರು ಚೆಕ್‍ಪೆÇಸ್ಟ್‍ಗಳ ಸಂಖ್ಯೆ, ಪೆÇಲೀಸರ ನಿಯೋಜನೆ ಸೇರಿದಂತೆ ಚುನಾವಣೆ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಜಿ.ಪಂ.ಸಿಇಒ ಎಸ್.ಭರತ್ ಅವರು ಮಾತನಾಡಿ ಜಿಲ್ಲೆಯಲ್ಲಿ ಶೇಕಡವಾರು ಮತದಾನ ಹೆಚ್ಚಳಕ್ಕೆ ಸಂಬಂಧಿಸಿದಂತೆ ವಿವಿಧ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿ.ಪಂ.ಮುಖ್ಯ ಲೆಕ್ಕಾಧಿಕಾರಿ ಅಮಿನಸಾಬ್ ಅತ್ತಾರ, ನಿಯಂತ್ರಣ ಕೊಠಡಿಯ ನೋಡಲ್ ಅಧಿಕಾರಿ ಸೈಯದ್ ಸೇರಿದಂತೆ ವಿವಿಧ ವಿಭಾಗದ ನೋಡಲ್ ಅಧಿಕಾರಿಗಳು ಇದ್ದರು.