ಚುನಾವಣಾ ವೆಚ್ಚ ವೀಕ್ಷಕರಿಂದ ಸಂಡೂರು ವಿಧಾನಸಭಾ ಕ್ಷೇತ್ರದ ವಿವಿಧ ಚೆಕ್‍ಪೋಸ್ಟ್‍ಗಳಿಗೆ ಭೇಟಿ ಪರಿಶೀಲನೆ


ಬಳ್ಳಾರಿ,ಏ.15: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಕಾರ್ಯನಿರ್ವಹಿಸುತ್ತಿರುವ 95-ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೊತಲ್‍ಕುಂಟ, ಜಿ.ಬಸಾಪುರ, ದಿಕ್ಕಲದಿನ್ನಿ ಚೆಕ್‍ಪೋಸ್ಟ್‍ಗಳಿಗೆ ಚುನಾವಣಾ ವೆಚ್ಚ ವೀಕ್ಷಕರಾದ ಯುಧಸ್ತ್ ಕುಮಾರ್ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚೆಕ್‍ಪೋಸ್ಟ್‍ನಲ್ಲಿ ವಾಹನಗಳ ತಪಾಸಣೆ ಕೈಗೊಳ್ಳುವಿಕೆ ಮತ್ತು ಸಿಬ್ಬಂದಿಗಳ ನಿಯೋಜನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಇನ್ನೂ ಹೆಚ್ಚಾಗಿ ವಾಹನಗಳ ತಪಾಸಣೆ ಕೈಗೊಳ್ಳಲು ಕ್ರಮ ವಹಿಸಬೇಕು ಎಂದರು.
ಈ ವೇಳೆ ಕೆಆರ್‍ಇಡಿಎಲ್‍ನ ಕಾರ್ಯನಿರ್ವಾಹಕ ಇಂಜಿನಿಯರ್ ಅಶ್ವಥ ನಾರಾಯಣ ಅವರು ಹಾಗೂ ಸಿಬ್ಬಂದಿಗಳು ಇದ್ದರು.