ಚುನಾವಣೆಗೆ ತಂತ್ರಜ್ಞಾನ ಬಳಕೆ ಶ್ರೇಷ್ಠವಾದದ್ದು

ಸೈದಾಪುರ:ಜು,24:ಅಣಕು ಸಂಸತ ಚುನಾವಣೆಯಲ್ಲಿ ಮೊಬೈಲದಲ್ಲಿ ತಾಂತ್ರಿಕೆತೆಯನ್ನು ಬಳಕೆ ಮಾಡಿಕೊಂಡು ಚುನಾವಣೆ ನಡೆಸುತ್ತಿರುವುದು ಗ್ರಾಮೀಣ ಭಾಗದ ಸಂಸ್ಥೆಯ ಮಹತ್ವ ಹೆಚ್ಚಾಗುವಂತೆ ಮಾಡಿದೆ. ಇದು ಇತರರಿಗೆ ಮಾದರಿಯಾಗಲಿ ಎಂದು ಸಂಸ್ಥೆಯ ಅಧ್ಯಕ್ಷ ಸಣ್ಣ ಸಿದ್ರಾಮಪ್ಪಗೌಡ ಬೆಳಗುಂದಿ ಅಭಿಪ್ರಾಯಪಟ್ಟರು.
ಪಟ್ಟಣದ ವಿದ್ಯಾ ವರ್ಧಕ ಪ್ರೌಢ ಶಾಲೆಯಲ್ಲಿ ಅಣಕು ಸಂಸತ್ ಚುನಾವಣೆಗಾಗಿ ಸಿದ್ಧಪಡಿಸಲಾದ ವಿವಿಧ ಮಟ್ಟ ಗಟ್ಟೆಗಳ ಅಭ್ಯರ್ಥಿಗಳನ್ನು ಒಳಗೊಂಡ ಇವಿಎಂ ಮೊಬೈಲಗಳಲ್ಲಿನ ಮತ ಯಂತ್ರಗಳನ್ನು ವಿತರಿಸಿ ಮಾತನಾಡಿದರು. ಪ್ರಜಾಪ್ರಭುತ್ವ ಗಟ್ಟಿಯಾಗಲು ಮತದಾನ ಅತಿ ಮುಖ್ಯವಾಗಿದೆ. ಇದನ್ನು ಪ್ರೌಢ ಶಾಲಾ ಹಂತದಲ್ಲಿ ಮಕ್ಕಳಿಗೆ ಪ್ರಾಯೋಗಿಕವಾಗಿ ತಿಳಿಸುವ ಕೆಲಸ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು.
ಕಂದಾಯ ನೀರಿಕ್ಷಕ ದಸ್ತಗಿರಿ ನಾಯಕ ಮಾತನಾಡಿ, ಮತದಾನದ ಪ್ರಕ್ರಿಯೆಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಪ್ರತಿಯೊಬ್ಬರು ಮತದಾನದಲ್ಲಿ ಭಾಗವಹಿಸಬೇಕು. 18 ವರ್ಷದವರು ನೊಂದಣಿ ಮಾಡಿಕೊಳ್ಳುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು. ಸಂಸ್ಥೆಯ ಕೋಶಾಧ್ಯಕ್ಷ ಮುಕುಂದಕುಮಾರ ಅಲಿಝಾರ, ಮುಖ್ಯಗುರು ಲಿಂಗಾರಡ್ಡಿ ನಾಯಕ, ಪ್ರಾಂಶುಪಾಲರಾದ ಹಂಪಣ್ಣ ಸಜ್ಜನಶೆಟ್ಟಿ, ಜಿ.ಎಂ.ಗುರುಪ್ರಸಾದ, ಕರಬಸಯ್ಯ ದಂಡಿಗಿಮಠ, ಶಿಕ್ಷಕರು, ಸಿಬ್ಬಂದಿ ವರ್ಗದವರು ಸೇರಿದಂತೆ ಇತರರಿದ್ದರು. ಸಂಗಾರೆಡ್ಡಿ ನಿರೂಪಿಸಿ, ವಂದಿಸಿದರು.