ವಿಜಯಪುರ:ಎ.30: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳಿಗೆ ಚುನಾವಣಾ ಕಾರ್ಯಕ್ಕೆ ನಿಯೋಜಿತ ಪ್ರಿಸೈಡಿಂಗ್, ಸಹಾಯಕ ಪ್ರಿಸೈಡಿಂಗ್ ಮತ್ತು ಪೋಲಿಂಗ್ ಅಧಿಕಾರಿಗಳಿಗೆ ದಿನಾಂಕ : 02-05-2023 ರಂದು ಬೆಳಿಗ್ಗೆ 9-30 ಗಂಟೆಗೆ ಎರಡನೇ ಹಂತದ ತರಬೇತಿಯನ್ನು ಆಯಾ ವಿಧಾನಸಭಾ ತರಬೇತಿ ಕೇಂದ್ರಗಳಲ್ಲಿ ಹಮ್ಮಿಕೊಂಡಿದ್ದು, ಕಡ್ಡಾಯವಾಗಿ ತರಬೇತಿಗೆ ಹಾಜರಾಗಬೇಕು. ಒಂದು ವೇಳೆ ಗೈರು ಹಾಜರಾದಲ್ಲಿ ಅಂತಹ ಅಧಿಕಾರಿ-ಸಿಬ್ಬಂದಿಗಳ ಮೇಲೆ ಪ್ರಜಾ ಪ್ರತಿನಿಧಿ ಕಾಯ್ದೆಯನ್ವಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.
ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದಲ್ಲಿ ಎಂ.ಜಿ.ವಿ.ಸಿ.ಕಾಲೇಜ್ ತರಬೇತಿ ಕೇಂದ್ರದಲ್ಲಿ, 27-ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಇಂಗ್ಲೀಷ್ ಮಿಡಿಯಂ ಹೈಸ್ಕೂಲ್‍ನಲ್ಲಿ, 28-ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಶ್ರೀ ಬಸವೇಶ್ವರ ಸರಕಾರಿ ಪದವಿಪೂರ್ವ ಕಾಲೇಜ್, 29-ಬಬಲೇಶ್ವರ ಮತಕ್ಷೇತ್ರದಲ್ಲಿ ಬಬಲೇಶ್ವರದ ಶ್ರೀ ಶಾಂತವೀರ ಪದವಿಪೂರ್ವ ಕಾಲೇಜ್, 30-ಬಿಜಾಪುರ ನಗರ ಮತಕ್ಷೇತ್ರದಲ್ಲಿ ಪಿಡಿಜೆ ಪದವಿಪೂರ್ವ ಮತ್ತು ಪ್ರೌಢಶಾಲೆ, 31-ನಾಗಠಾಣ ಮತಕ್ಷೇತ್ರದಲ್ಲಿ ವಿಜಯಪುರ ನಗರದ ಪಿಡಿಜೆ ಪದವಿಪೂರ್ವ ಮತ್ತು ಪ್ರೌಢಶಾಲೆಯಲ್ಲಿ, 32-ಇಂಡಿ ಮತಕ್ಷೇತ್ರದ ಇಂಡಿ ಸರ್ಕಾರಿ ಆದರ್ಶ ವಿದ್ಯಾಲಯ ಹಾಗೂ 33-ಸಿಂದಗಿ ಮತಕ್ಷೇತ್ರದ ಆರ್.ಡಿ.ಪಾಟೀಲ & ಪಿ.ಬಿ.ಪೋರವಾಲ ಕಾಲೇಜ್ ಸಿಂದಗಿ ತರಬೇತಿ ಕೇಂದ್ರದಲ್ಲಿ ತರಬೇತಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.