ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವವರು ಅರ್ಜಿ ಸಲ್ಲಿಕೆ

ಕೋಲಾರ,ನ,೧೬-ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸೂಚನೆಯಂತೆ ಕಾಂಗ್ರೆಸ್ ಪಕ್ಷದಿಂದ ೨೦೨೩ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಅರ್ಜಿ ಸಲ್ಲಿಬೇಕೆಂದು ಮಾಹಿತಿ ನೀಡಿದ್ದ ಹಿನ್ನಲೆಯಲ್ಲಿ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಚಿಂತಾಮಣಿ ಕ್ಷೇತ್ರದಿಂದ ಮಾಜಿ ಶಾಸಕ ಡಾ.ಎಂ.ಸಿ ಸುಧಾಕರ್ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ರಾಜ್ಯ ಕಾಂಗ್ರೆಸ್ ಮುಖಂಡ ಅಂಜಿನಪ್ಪ, ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಕೇಶವರೆಡ್ಡಿ, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶ್ರೀಧರ್, ಕೋಲಾರ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಂ.ಸಿ ನೀಲಕಂಠೇಗೌಡ, ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್ ಇದ್ದರು.