
ರಾಯಚೂರು, ಮಾ.೨೭- ಮುಂಬರುವ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಆಗುವ ಸಾಧ್ಯತೆಯಿದ್ದು ಚುನಾವಣಾ ಅಕ್ರಮಗಳನ್ನು ತಡೆಯಲು ಈಗಿನಿಂದಲೇ ಕಟ್ಟೆಚ್ಚರವಹಿಸಬೇಕೆಂದು ಸಂಬಂಧಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರು ಸೂಚನೆ ನೀಡಿದರು.
ಅವರಿಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಚುನಾವಣೆ ಕಾರ್ಯಾಗಾರ ಸಭೆಯಲ್ಲಿ ಮಾತನಾಡಿದರು.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಚುನಾವಣೆ ಆಯೋಗ ನಿರ್ದೇಶನದಂತೆ ಕಾರ್ಯನಿರ್ವಹಿಸಬೇಕೆಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು. ಚುನಾವಣೆ ಚಟುವಟಿಕೆಯಲ್ಲಿ ಅಕ್ರಮ ಮತ್ತು ಪಕ್ಷಪಾತ ಮಾಡಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಚುನಾವಣೆ ಪ್ರಚಾರಕ್ಕೆ ಪರವಾನಿಗೆ ಪಡೆಯದ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಪಕ್ಷದ ಅಭ್ಯರ್ಥಿಗಳು ಚುನಾವಣೆ ಪ್ರಚಾರಕ್ಕೆ ಸರಕಾರಿ ವಾಹನ ಬಳಸುವಂತಿಲ್ಲ ಸರಕಾರಿ ವಾಹನ ಕಂಡು ಬಂದರೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಬೇಕು.
ಚುನಾವಣೆ ನೀತಿ ಸಂಹಿತೆ ಜಾರಿ ದಿನದಿಂದ
ಸರಕಾರಿ ಕಾರ್ಯಕ್ರಮ ಮತ್ತು ವೈಯುಕ್ತಿಕ ಕಾರ್ಯಕ್ರಮಗಳು ನಡೆಯದಂತೆ ನಿರ್ಬಂಧ ಏರಿಬೇಕು ಎಂದು ಸೂಚನೆ ನೀಡಿದರು.
ನೀತಿ ಸಂಹಿತೆ ಜಾರಿಯಾದ ದಿನದಿಂದ ೨೪ ಗಂಟೆ ಒಳಗಡೆ ಸಾರ್ವಜನಿಕ ಬ್ಯಾನರ್ ತೇರುವುಗೋಳಸಬೇಕು.ಮತದಾರರಿಗೆ ಆಮಿಷ ಒಡ್ಡುವ ಪ್ರಕರಣಗಳು ಕಂಡುಬಂದಲ್ಲಿ, ಸಾರ್ವಜನಿಕವಾಗಿ ಅಥವಾ ದೂರು ಬಂದಲ್ಲಿ ಪ್ರಕರಣ ದಾಖಲಿಸಬೇಕೆಂದು ಸೂಚನೆ ನೀಡಿದರು.
ಗ್ರಾಮ ಪಂಚಾಯತ್ ಮತ್ತು ನಗರದ ವ್ಯಾಪ್ತಿಯಲ್ಲಿ
ನೂತನ ಕಾಮಗಾರಿ ಶಂಕುಸ್ಥಾಪನೆ ಭೂಮಿ ಸೇರಿದಂತೆ ಕಾಮಗಾರಿಗಳಿಗೆ ಅವಕಾಶ ನೀಡಬಾರದು. ಪ್ರಗತಿಯಲ್ಲಿದ್ದ ಕಾಮಗಾರಿಗಳಿಗೆ ಮಾತ್ರ ಅವಕಾಶ ನೀಡಬೇಕು. ಜಿಲ್ಲೆಯಾದ್ಯಂತ ಕಾಮಗಾರಿಗಳ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಬೇಕು ಎಂದರು.
ಗೋಡೆ ಬರಹ ಕಂಡು ಬಂದಲ್ಲಿ ಕ್ರಮ ಜರುಗಿಸಬೇಕು.ಈ ಸಂದರ್ಭದಲ್ಲಿ ಅಪರ ರವೀಂದ್ರ ಕರಿಲಿಂಗಣ್ಣ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.