
ಕೆ.ಆರ್.ಪೇಟೆ: ಏ.10:- ತಾಲ್ಲೂಕಿನಾದ್ಯಂತ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಳು ನಡೆಯಬೇಕೆಂಬ ಉದ್ದೇಶದಿಂದ ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಗೋಪಾಲಕೃಷ್ಣ ತಿಳಿಸಿದರು.
ಅವರು ಪಟ್ಟಣದ ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲನೆ ನಡೆಸಿ ಮಾತನಾಡಿ ಚುನಾವಣಾ ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಅನುಪಾಲನೆ ಮಾಡಲು ಸೂಕ್ತ ಕ್ರಮ ವಹಿಸಬೇಕು. ಪಾರದರ್ಶಕ ಶಾಂತಿ, ಸುವ್ಯವಸ್ಥಿತ ಚುನಾವಣೆ ನಡೆಸಲು ಕರ್ತವ್ಯ ನಿರತ ಅಧಿಕಾರಿಗಳು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. 80ವರ್ಷ ತುಂಬಿದ ಮತದಾರರಿಗೆ ಹಾಗೂ ವಿಕಲಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಚೆಕ್‍ಪೆÇೀಸ್ಟ್‍ಗಳಲ್ಲಿ ಕಡ್ಡಾಯವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಯಾರೇ ಆಗಲಿ ನಿಯಮ ಮೀರಿ ಸಾಗಿಸುವ ಹಣ ಮತ್ತು ವಸ್ತುಗಳನ್ನು ಮುಲಾಜಿಲ್ಲದೇ ವಶಪಡಿಸಿಕೊಳ್ಳಬೇಕು. ಅಕ್ರಮವಾಗಿ ಸಾಗಿಸುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಚುನಾವಣಾ ಕರ್ತವ್ಯನಿರತ ಅಧಿಕಾರಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭ ತಹಸೀಲ್ದಾರ್ ನಿಸರ್ಗಪ್ರಿಂiÀi, ಚುನಾವಣಾಧಿಕಾರಿ ಕೃಷ್ಣಕುಮಾರ್, ಚುನಾವಣಾ ಶಿರಸ್ತೇದಾರ್ ಹರೀಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ಪಟ್ಟಣ ಠಾಣೆಯ ಪೆÇೀಲೀಸ್ ನಿರೀಕ್ಷಕ ಆನಂದಕುಮಾರ್, ಪಿ.ಎಸ್.ಐ ಸುನಿಲ್, ಗ್ರಾಮಾಂತರ ಪೊಲೀಸ್ ನಿರೀಕ್ಷಕ ಜಗದೀಶ್, ಪಿ.ಎಸ್.ಐ ಬಸವರಾಜುಚಿಂಚೋಳಿ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳು ಹಾಜರಿದ್ದರು.