ಚುನಾವಣೆ ಗುರುತಿನ ಚೀಟಿಗೆ ಆಧಾರ ಜೋಡಣೆ, ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಸಭೆ

ಯಾದಗಿರಿ: ಜು, 28; ಚುನಾವಣೆ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಲು ಸಾರ್ವಜನಿಕರಿಗೆ ಪ್ರೇರಣೆ ನೀಡುವಂತೆ ರಾಜಕೀಯ ಪಕ್ಷಗಳ ಮುಖಂಡರು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮನವಿ ಮಾಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಚುನಾವಣೆ ಗುರುತಿನ ಚೀಟಿಗೆ ಆಧಾರ ಜೋಡಣೆ ಕುರಿತಂತೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ವೋಟರ್ ಐಟಿ ಜತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಅವಕಾಶವಿದೆ , ಆಧಾರ್ ಕಾರ್ಡ್ ಇಲ್ಲದಿದ್ದರೆ ಪರ್ಯಾಯ ದಾಖಲಾತಿಯೂ ನೀಡಬಹುದಾಗಿದೆ. ಆಧಾರ್ ಸಂಖ್ಯೆ ಒದಗಿಸುವುದು ಸಂಪೂರ್ಣವಾಗಿ ಸ್ವಯಂ ಪ್ರೇರಿತವಾಗಿದೆ. ಆಧಾರ್ ಜೋಡಣೆ ಕಡ್ಡಾಯವಲ್ಲ ಬದಲಾಗಿ ಮತದಾರರ ಆಧಾರ್ ಮತ್ತು ಮತದಾರರ ಚೀಟಿ ಜೋಡಣೆಯಾದರೆ ಹಲವು ಪ್ರಯೋಜನಗಳಿವೆ. ಮುಖ್ಯವಾಗಿ ನಕಲಿ ಮತದಾನದ ಕಿರಿಕಿರಿ ತಪ್ಪಲಿದೆ. ಮತಗಟ್ಟೆ ಅಧಿಕಾರಿಯು ಮತದಾರರ ಆಧಾರ್ ಗುರುತಿನ ಚೀಟಿ ಪಡೆದು ದಾಖಲು ಮಾಡಿಕೊಳ್ಳುತ್ತಾರೆ. ಒಮ್ಮೆ ಮತದಾರರ ಆಧಾರ್ ಕಾರ್ಡ್ ಸಂಖ್ಯೆ ದಾಖಲಾದರೆ, ಮತ್ತೊಂದು ಬೂತ್‍ಗೆ ಹೋಗಿ ನಕಲಿ ಮತದಾನ ಮಾಡಿ ವಂಚಿಸುವುದು ತಪ್ಪಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಆನ್ಲೈನ್ ಮತ್ತು ಆಫ್ಲೈನಲ್ಲಿಯೂ ಸಲ್ಲಿಸಬಹುದು:

ಓಗಿSP, ಗಿಊಂ, ಇಖಔಓಇಖಿ ಮತ್ತು ಉಂಖUಆಂ ಅಪ್ಲಿಕೇಶನಗಳಲ್ಲಿ ಫಾರ್ಮ್ 6ಃ ಯನ್ನು ಪಡೆದು ಆಧಾರ ಸಂಖ್ಯೆಯನ್ನು ಜನರು ಸ್ವಯಂ ನೋಂದಾಯಿಸಬಹುದು.

ಬೂತ್ ಮಟ್ಟದ ಅಧಿಕಾರಿಗಳ ಮೂಲಕ ಆಧಾರ್ ಲಿಂಕ್ : ಹತ್ತಿರದ ಬೂತ್ ಮಟ್ಟದ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸುವ ಮೂಲಕ ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಮಾಡಬಹುದಾಗಿದೆ. ಬೂತ್ ಮಟ್ಟದ ಅಧಿಕಾರಿಯು ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಾರೆ. ವಿವರಗಳನ್ನು ಪರಿಶೀಲಿಸಲು ನಿಮ್ಮ ಮನೆಗಳಿಗೆ ಭೇಟಿ ನೀಡಬಹುದು. ಒಮ್ಮೆ ಪರಿಶೀಲಿಸಿದರೆ, ನಂತರ ಅದು ದಾಖಲೆಗಳಲ್ಲಿ ಕಾಣಿಸಿಕೊಳ್ಳಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಆಧಾರ್ ಸಂಖ್ಯೆಯನ್ನು ಹೊಂದಿರದವರು ಒದಗಿಸಬಹುದಾದ ಪರ್ಯಾಯ ದಾಖಲೆಗಳು; ನರೇಗಾ ಜಾಬ್ ಕಾರ್ಡ್, ಬ್ಯಾಂಕ್ ಅಥವಾ ಪೆÇೀಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್ ಬುಕ್, ಕಾರ್ಮಿಕ ಇಲಾಖೆ ನೀಡಿದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಿಗೆ, ಪ್ಯಾನ್ ಕಾರ್ಡ್, ಎನ್.ಪಿ ಆರ್ ಅಡಿಯಲ್ಲಿ ನೀಡಿದ ಆರ್.ಜಿ.ಐ ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್‍ಪೆÇೀರ್ಟ್, ಭಾವಚಿತ್ರವಿರುವ ಪಿಂಚಣಿ ದಾಖಲೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ, ಸಂಸದರು/ಶಾಸಕರು/ಎಂಎಲ್ಸಿ ಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿ, ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ ನೀಡಲಾದ ವಿಶಿಷ್ಟ ಗುರುತಿನ ಚೀಟಿ ಯ ದಾಖಲೆಗಳನ್ನು ನಮೂದಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಚುನಾವಣಾ ತಹಶೀಲ್ದಾರ ಸಂತೋಷರಾಣಿ, ರಾಜಕೀಯ ಮುಖಂಡರುಗಳಾದ ನಾಗರತ್ನ ಅನಪೂರ, ಶಾಂತಪ್ಪ ಡಿ ಜಾಧವ್, ವಿಶ್ವನಾಥ ಸಿರವಾರ, ಅಬ್ದುಲ್ ಕರೀಮ್, ಹೆಚ್ ಆರ್ ಮೊಕಾಶಿ, ಚೆನ್ನಾರೆಡ್ಡಿ ಬಿಳ್ಹಾರ್, ಸುರೇಶ ಜೈನ್, ಜಗನ್ನಾಥ ಎಸ್ ಚಿಂತನಹಳ್ಳಿ, ಬಸವರಾಜ ಠಾಣಗುಂದಿ, ಲಿಂಗಪ್ಪ ಪೂಜಾರಿ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.