ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ : ಕಿರಣ ಆನೆಗುಂದಿ ಸರ್ಕಾರಿ ಸೇವೆಯಿಂದ ಅಮಾನತ್ತು

ಯಾದಗಿರಿ : ಮೇ 09 : ಕಿರಣ ಆನೆಗುಂದಿ ಪ್ರಥಮ ದರ್ಜೆ ಸಹಾಯಕ ಪ್ರಥಮಿಕ ಆರೋಗ್ಯ ಕೇಂದ್ರ ಸಗರ ತಾಲೂಕು ಶಹಾಪುರ ಇವರನ್ನು ಚುನಾವಣೆ ನೀತಿ ಸಂಹಿತೆ ಉಲ್ಲಂಘಸಿರುವುದಕ್ಕೆ ಸರ್ಕಾರಿ ಸೇವೆಯಿಂದ ಅಮಾನತ್ತು ಮಾಡಿ ಜಿಲ್ಲಾಧಿಕಾರಿ ಸ್ನೇಹಲ್.ಆರ್ ಅವರು ಆದೇಶಿಸಿದ್ದಾರೆ.
ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿರುವುದರಿಂದ ಪ್ರಜಾ ಪ್ರತಿನಿಧಿ ಕಾಯ್ದೆ 1951 ಕಲಂ (134) ನಿಯಮ ಉಲ್ಲಂಘನೆ ಮಾಡಿದ್ದರಿಂದ ಸದರಿಯವರನ್ನು ಪ್ರಜಾ ಪ್ರತಿನಿಧಿ ಕಾಯ್ದೆ 1951 ಕಲಂ 28 (ಎ) ರಡಿ ಹಾಗೂ ಪ್ರದತವಾದ ಅಧಿಕಾರದಂತೆ ಹಾಗೂ ಕರ್ನಾಟಕ ನಾಗರಿಕ ಸೇವಾ (ವರ್ಗಿಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ 1957 ನಿಯಮ 10 (1)ರನ್ವಯ ಸದರಿಯವರ ಮೇಲಿನ ಇಲಾಖಾ ವಿಚಾರಣೆ ಬಾಕಿ ಇರಿಸಿ ಸರಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಸರಕಾರಿ ಸೇವೆಯಿಂದ ಅಮಾನತ್ತು ಮಾಡಿ ಆದೇಶಿಸಲಾಗಿದೆ.
ಅಮಾನತ್ತಿನ ಅವಧಿಯಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ 1957 ನಿಯಮ 98 ರನ್ವಯ ಸದರಿಯವರು ಜೀವನಾಂಶ ಭತ್ಯಗೆ ಅರ್ಹರಾಗಿರುತ್ತಾರೆ ಮತ್ತು ಸಕ್ಷಮ ಪ್ರಾಧಿಕಾರಿಗಳ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲವೆಂದು ಆದೇಶಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.