ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ : ಸರ್ಕಾರಿ ಸೇವೆಯಿಂದ ಅಮಾನತ್ತು

ಯಾದಗಿರಿ : ಮೇ 09: ಮಹೇಶಚಂದ್ರ ಕೆಲಸ ನಿರೀಕ್ಷಕ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೃ.ಭಾ.ಜ.ನಿ.ನಿ ಜೆಬಿಸಿ ಉಪ ವಿಭಾಗ-8 ಭೀಮರಾಯನಗುಡಿ ಇವರನ್ನು ಚುನಾವಣೆ ನೀತಿ ಸಂಹಿತೆ ಉಲ್ಲಂಘಸಿರುವ ಕಾರಣ ಸರ್ಕಾರಿ ಸೇವೆಯಿಂದ ಅಮಾನತ್ತು ಮಾಡಿ ಜಿಲ್ಲಾಧಿಕಾರಿ ಸ್ನೇಹಲ್.ಆರ್ ಅವರು ಆದೇಶಿದ್ದಾರೆ.

 ಚುನಾವಣೆ ನೀತಿ ಸಂಹಿತೆ ಉಲ್ಲಂಘಸಿರುವುದರಿಂದ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಕಲಂ 134ರಡಿ ಪ್ರದತ್ತವಾದ ಅಧಿಕಾರದಂತೆ ಹಾಗೂ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ, ಮೇಲ್ಮನವಿ) ನಿಯಮಗಳು 1957ರ ನಿಯಮ 10(1)ರನ್ವಯ ಸದರಿಯವರ ಮೇಲಿನ ಇಲಾಖಾ ವಿಚಾರಣೆ ಬಾಕಿ ಇರಿಸಿ ಸರ್ಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತು ಮಾಡಿ ಆದೇಶಿಸಲಾಗಿದೆ.

 ಅಮಾನತ್ತಿನ ಅವಧಿಯಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ 1957 ನಿಯಮ 98ರನ್ವಯ ಸದರಿಯವರು ಜೀವನಾಂಶ ಭತ್ಯಗೆ ಅರ್ಹರಾಗಿರುತ್ತಾರೆ. ಮತ್ತು ಸಕ್ಷಮ ಪ್ರಾಧಿಕಾರಿಗಳ ಪೂರ್ವಾನುಮತಿ ಪಡೆಯದೆ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.