ಚುನಾವಣೆ ಪ್ರಜಾಪ್ರಭುತ್ವದ ಬಹುದೊಡ್ಡ ಹಬ್ಬ: ಬಸವರಾಜ ಬಬಲಾದ

ಇಂಡಿ:ಎ.9:ಮತದಾನ ಮಾಡುವುದು ನಮ್ಮ ನಾಗರಿಕರ ಆದ್ಯ ಜವಾಬ್ದಾರಿ. ಇದು ನಮ್ಮ ರಾಷ್ಟ್ರದ ಮೂಲಭೂತ ಹಕ್ಕುಗಳಲ್ಲಿ ಒಂದಾಗಿದೆ.ಚುನಾವಣೆ ಪ್ರಜಾಪ್ರಭುತ್ವದ ಬಹುದೊಡ್ಡ ಹಬ್ಬವಾಗಿದೆ. ಕಡ್ಡಾಯ ಮತದಾನ ಮತ್ತು ನೆ?ತಿಕ ಮತದಾನಕ್ಕೆ ಒತ್ತು ನೀಡಬೇಕಾಗಿದೆ ಎಂದು ಹಿರೇರೂ ಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಬಬಲಾದ ಹೇಳಿದರು.
ಅವರು ತಾಲೂಕಿನ ಹಿರೇರೂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನ ಜಾಗೃತಿಗಾಗಿ ಪಂಜಿನ ಮೆರವಣಿಗೆ ಮೂಲಕ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
18 ವರ್ಷ ವಯಸ್ಸಿನ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.ಮತದಾನದ ದಿನವಾದ ಮೇ 10 ರಂದು ತಪ್ಪದೇ ಮತ ಚಲಾಯಿಸಬೇಕು. ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯಬಾರದು. ದೇಶದ ಉಜ್ವಲ ಭವಿಷ್ಯಕ್ಕಾಗಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಹೇಳಿದರು.
ಪಂಜಿನ ಮೆರವಣಿಗೆ ಮೂಲಕ ಸಾರ್ವಜನಿಕರಿಗೆ ಮತದಾನದ ಜವಾಬ್ದಾರಿಯ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.