
ಬೀದರ್:ಮಾ.11: ಬರುವ ವಿಧಾನಸಭೆ ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ನಡೆಸುವ ದಿಸೆಯಲ್ಲಿ ಪೆÇಲೀಸರು ಬೀದರ್ ತಾಲ್ಲೂಕಿನ ಬಾವಗಿ ಗ್ರಾಮದಲ್ಲಿ ಪಥ ಸಂಚಲನ ನಡೆಸಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಮಾರ್ಗದರ್ಶನ ಹಾಗೂ ಡಿವೈಎಸ್‍ಪಿ ಕೆ.ಎಂ. ಸತೀಶ್ ನೇತೃತ್ವದಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಯಿತು.
ಸಿಪಿಐ ಶ್ರೀನಿವಾಸ ಅಲ್ಲಾಪುರ, ಪಿಎಸ್‍ಐ ಸುವರ್ಣಾ ಅಶೋಕ ಕೋಟೆ, ಭದ್ರೇಶ್ವರ ಮಠದ ಶಿವಕುಮಾರ ಸ್ವಾಮೀಜಿ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.