ಚುನಾವಣೆ ಸಿದ್ಧತೆ: ಸಭೆ

ಗದಗ,ಏ 21: ಲೋಕಸಭಾ ಚುನಾವಣೆ ಸಿದ್ಧತೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳು. ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಶೀಲ್ದಾರರ ಜೊತೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸಭೆ ನಡೆಸಿದರು.

  ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಂಚೆ ಮತಪತ್ರ, ಅಗತ್ಯ ಸೇವೆಗಳಡಿ ಅಂಚೆ ಮತದಾನ, ಮತಗಟ್ಟೆಗೆ ತೆರಳಲು ಆಗದಿರುವ ಹಾಗೂ ಈಗಾಗಲೇ ಒಪ್ಪಿಗೆ ನೀಡಿರುವ 85 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನರಿಂದ `ಮನೆ ಮತದಾನ' ಮಾಡಿಸುವ ಕಾರ್ಯ, ಮತದಾರರ ಮಾಹಿತಿ ಚೀಟಿ ಹಂಚಿಕೆ ಹೀಗೆ ಚುನಾವಣೆ ಸಂಬಂಧ ಹಲವು ವಿಷಯಗಳ ಕುರಿತು ಜಿಲ್ಲಾಧಿಕಾರಿ ಅವರು ಸುಧೀರ್ಘ ಚರ್ಚೆ ನಡೆಸಿದರು.
   ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಕರ್ತವ್ಯ ನಿರ್ವಹಿಸಬೇಕು. ಚುನಾವಣೆಗೆ ಸಂಬಂಧಿಸಿದಂತೆ ಕಾಲಕಾಲಕ್ಕೆ ನಡೆಯುವ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಚುನಾವಣೆಯನ್ನು ಅಚ್ಚುಕಟ್ಟಾಗಿ ನಡೆಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. 
   ಜಿ.ಪಂ.ಸಿಇಒ ಎಸ್ ಭರತ್ ಅವರು ಮಾತನಾಡಿ ಚುನಾವಣಾ ಕರ್ತವ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಮತದಾನ ಹೆಚ್ಚಳಕ್ಕೆ ಪೆÇ್ರೀತ್ಸಾಹಿಸಬೇಕು. ಚುನಾವಣೆಗೆ ನಿಯೋಜಿಸಿರುವ ಅಧಿಕಾರಿಗಳು  ತಂಡವಾಗಿ ಕಾರ್ಯ ನಿರ್ವಹಿಸಬೇಕು. ಮಹಿಳೆಯರು ಸೇರಿದಂತೆ ಅರ್ಹರೆಲ್ಲರೂ ಮತದಾನದ ದಿನದಂದು ಮತಗಟ್ಟೆಗೆ ತೆರಳಿ ಮತ ಚಲಾಯಿಸುವಂತಾಗಲು ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿ.ಪಂ.ಸಿಇಒ ಸಲಹೆ ಮಾಡಿದರು.
   ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ ಅವರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸಬೇಕು. ಸಮಸ್ಯೆಗಳಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸಲಹೆ ಮಾಡಿದರು.
  ಉಪ ವಿಭಾಗಾಧಿಕಾರಿ ವೆಂಕಟೇಶ ನಾಯ್ಕ ಅವರು ಚುನಾವಣೆ ಸಂಬಂಧ ಹಲವು ಮಾಹಿತಿ ನೀಡಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ ಬಿದರಿ, ತಹಶೀಲ್ದಾರರಾದ ಶ್ರೀನಿವಾಸ ಕುಲಕರ್ಣಿ ಇತರರು ಇದ್ದರು.