ಚೂರಿ ಇರಿದ ಆರೋಪಿಗೆ ಉಗ್ರರ ನಂಟು: ಶೀಘ್ರ ಎನ್ಐಗೆ ಹಸ್ತಾಂತರ:ಆರಗ

ಶಿವಮೊಗ್ಗ ,ಸೆ.3-ಪ್ರೇಮ್ ಸಿಂಗ್ ಚೂರಿ ಇರಿತ ಪ್ರಕರಣದ ಪ್ರಮುಖ ಆರೋಪಿ ಜಬೀವುಲ್ಲಾ ಸಂಪರ್ಕ ಭಯಾನಕವಾಗಿದ್ದು, ಉಗ್ರರ ಜತೆ ಸಂಬಂಧ ಇರುವುದು ಬಹಿರಂಗ ವಾಗುತ್ತಿದೆ. ಶೀಘ್ರ ಈ ಪ್ರಕರಣವನ್ನು ಎನ್ ಐಎ ಗೆ ಹಸ್ತಾಂತರ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗ ಸಂಪೂರ್ಣ ಶಾಂತಿಯುತವಾಗಿದೆ.ಆಗಾಗ ಆಕಸ್ಮಿಕ ಘಟನೆಗಳು ನಡೆಯುತ್ತವೆ ಅಷ್ಟೇ. ರಾಜಕೀಯ ಪಕ್ಷ ಹೊರತುಪಡಿಸಿ ಕಾರ್ಯಕ್ರಮ ನಡೆಯುತ್ತಿದೆ ಸುದ್ದಿಗಾರರೊಂದಿಗೆ ತಿಳಿಸಿದರು.
ಮುರುಘಾ ಶ್ರೀ ಬಂಧನ‌ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಇದರಲ್ಲಿ ಸರಕಾರ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ತನಿಖೆ ದೃಷ್ಟಿಯಿಂದ ಹೆಚ್ಚಿಗೆ ಏನನ್ನೂ ಹೇಳುವುದಿಲ್ಲ. ಮುರುಘಾ ಮಠಕ್ಕೆ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿದ್ದು, 7 ಕೆಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ ಎಂದು ಹೇಳಿದರು.
ರಾಜ್ಯದ ಬಗ್ಗೆ ಪ್ರಧಾನಮಂತ್ರಿ ಮೋದಿಯವರಿಗೆ ವಿಶೇಷ ಆಸಕ್ತಿ ಇದೆ. ತಿಂಗಳಿಗೊಮ್ಮೆ ಭೇಟಿ ನೀಡುವುದಾಗಿ‌ ಹೇಳಿದ್ದಾರೆ. ಚುನಾವಣೆಗೆ ನಾವು ಸಿದ್ದರಾಗಿದ್ದೇವೆ. ಸೆ.8 ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.