ಚೆಕ್‍ಪೋಸ್ಟ್‍ಗಳಲ್ಲಿ ವಾಹನ ತಪಾಸಣೆ

ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಏ.೩;ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಚೆಕ್‍ಪೋಸ್ಟ್‍ಗಳಿಗೆ ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ಮಂಗಳವಾರ ಭೇಟಿ ನೀಡಿ, ವಾಹನಗಳ ತಪಾಸಣೆ ನಡೆಸಿದರು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ವಡ್ಡರ ಪಾಳ್ಯ ಚೆಕ್‍ಪೋಸ್ಟ್, ತಿರುಮಲ ಡಾಬಾ ಚೆಕ್‍ಪೋಸ್ಟ್, ಕ್ಯಾದಿಗೆರೆ, ಕೆಳಗಳಹಟ್ಟಿ ಚೆಕ್‍ಪೋಸ್ಟ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಎಸ್‍ಎಸ್‍ಟಿ ತಂಡದ ರವಿಕುಮಾರ್, ಕಂದಾಯ ನಿರೀಕ್ಷಕ ಮೋಹನ್ ಕುಮಾರ್, ಗ್ರಾಮ ಆಡಳಿತಾಧಿಕಾರಿ ಮಮತಾ,  ಚುನಾವಣಾ ವಿಷಯ ನಿರ್ವಾಹಕ ನವೀನ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.