ಚೆಕ್ ಪೆÇೀಸ್ಟ್, ಮತದಾನ ಕೇಂದ್ರ ಪರಿಶೀಲಿಸಿದ ಜಿಲ್ಲಾಧಿಕಾರಿ


ಬೆಳಗಾವಿ, ಮಾ.28:ಬೆಳಗಾವಿ ಲೋಕಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಅಂತರ್ ರಾಜ್ಯ ಗಡಿಭಾಗದಲ್ಲಿ ಸ್ಥಾಪಿಸಲಾಗಿರುವ ಚೆಕ್‍ಪೆÇೀಸ್ಟ್‍ಗಳನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಪರಿಶೀಲಿಸಿದರು.
ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯದ ಗಡಿಗೆ ಹೊಂದಿಕೊಂಡಿರುವ ವಿವಿಧ ಚೆಕ್ ಪೆÇೀಸ್ಟ್ ಗಳಿಗೆ ಶನಿವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಚೆಕ್‍ಪೆÇೀಸ್ಟ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಜತೆ ಚರ್ಚೆ ನಡೆಸಿದ ಅವರು, ಚೆಕ್‍ಪೆÇೀಸ್ಟ್ ಮೂಲಕ ಸಾಗುವ ಪ್ರತಿಯೊಂದು ವಾಹನವನ್ನು ಸಮರ್ಪಕವಾಗಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.
ಪರಿಶೀಲನೆ ಸಂದರ್ಭದಲ್ಲಿ ಅಕ್ರಮ ಹಣ, ಮದ್ಯ ಮತ್ತಿತರ ವಸ್ತುಗಳು ವಶಪಡಿಸಿಕೊಂಡಲ್ಲಿ ತಕ್ಷಣವೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡುವುದರ ಜತೆಗೆ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಾಚಿ, ಬೆಕ್ಕಿನಕೇರಿ, ರಾಕಸಕೊಪ್ಪ, ಸಂತಿಬಸ್ತವಾಡ ಕ್ರಾಸ್, ದೇಸೂರ ಕ್ರಾಸ್ ಖಾನಾಪೂರ ರಸ್ತೆಯ ಕೆಲವು ಚೆಕ್‍ಪೆÇೀಸ್ಟ್‍ಗಳಿಗೆ ಭೇಟಿ ನೀಡಿದರು.
ಇದೇ ಸಂದರ್ಭದಲ್ಲಿ ಕೆಲವು ಮತದಾನ ಕೇಂದ್ರ (ಮತಗಟ್ಟೆ)ಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಮತಗಟ್ಟೆಗಳಲ್ಲಿ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಶೌಚಾಲಯ ಸೇರಿದಂತೆ ಚುನಾವಣಾ ಆಯೋಗದ ನಿರ್ದೇಶನಗಳ ಅನ್ವಯ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಶಿವನಗೌಡ ಪಾಟೀಲ, ತಹಶಿಲ್ದಾರ ಕುಲಕರ್ಣಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.