ಚೆಕ್ ಪೋಸ್ಟ್ ಗೆ ಜಿ.ಪಂ. ಸಿಇಓ ಭೇಟಿ: ಪರಿಶೀಲನೆ


ಗದಗ,ಏ1 : ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಹಿನ್ನೆಲೆ ಈಗಾಗಲೇ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಅಕ್ರಮ ನಗದು, ಸಾಮಗ್ರಿ ತಡೆಗಾಗಿ ಜಿಲ್ಲಾಡಳಿತ ಜಿಲ್ಲಾದ್ಯಂತ 18 ಸ್ಥಳಗಳಲ್ಲಿ ಚೆಕ್‍ಪೋಸ್ಟಗಳನ್ನು ತೆರೆದು ಪ್ರತಿದಿನ ನಿರಂತರವಾಗಿ ವಾಹನಗಳ ತಪಾಸಣೆ ಜರುಗಿಸಲಾಗುತ್ತಿದೆ.
ಶುಕ್ರವಾರ ರೋಣ ತಾಲೂಕಿನ ಹಿರೇಹಾಳ ಚೆಕ್ ಪೋಸ್ಟ್‍ಗೆ ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ ಅವರು ಅನಿರೀಕ್ಷಿತವಾಗಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಚೆಕ್ ಪೋಸ್ಟ್‍ನಲ್ಲಿ ನಡೆಸಲಾಗುವ ತಪಾಸಣೆ ಕುರಿತು ಮಾಹಿತಿ ಪಡೆದ ಅವರು. ದಾಖಲೆಗಳಿಲ್ಲದೆ ನಗದು, ಸಾಮಗ್ರಿ, ಚಿನ್ನಾಭರಣ, ಮಧ್ಯ ಹಾಗೂ ವಾಣಿಜ್ಯ ಸರಕುಗಳನ್ನು ವಾಹನಗಳಲ್ಲಿ ಸಾಗಾಟ ಮಾಡುವದನ್ನು ಪರಿಶೀಲಿಸಬೇಕು. ದಾಖಲೆ ರಹಿತ ಸಾಮಗ್ರಿ, ನಗದು ದೊರೆತರೆ ನಿಯಮಾನುಸಾರ ಪ್ರಕರಣ ದಾಖಲಿಸುವಂತೆ ಚೆಕ್ ಪೋಸ್ಟ್‍ನಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಸಿಬ್ಬಂದಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ವಾಗೀಶ ಪಂಡಿತಾರಾಧ್ಯ, ರೋಣ ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ ರವಿ. ಎ. ಎನ್ ಹಾಗೂ ತಾಲೂಕ ಪಂಚಾಯತ ಯೋಜನಾಧಿಕಾರಿ ಸಿ.ಎಸ್ ನಿಲಗುಂದ ಸೇರಿದಂತೆ ಚೆಕ್ ಪೋಸ್ಟ್ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.