ಚೈತ್ರಾ, ಹಾಲಶ್ರೀ ನ್ಯಾಯಾಂಗ ಬಂಧನ

ಬೆಂಗಳೂರು,ಸೆ.23-ಬಿಜೆಪಿ ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಐದು ಕೋಟಿ ರೂ ವಂಚನೆ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಅಕ್ಟೋಬರ್ 6ರವರೆಗೆ ನಗರದ 3ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ. 
ಸಿಸಿಬಿ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಏಳು ಮಂದಿ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಅದರಂತೆ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇನ್ನು ಪ್ರಕರಣ ಸಂಬಂಧ ಜಾಮೀನು ಕೋರಿ ರಮೇಶ್, ಚನ್ನನಾಯ್ಕ್‌, ಧನರಾಜ್ ಸಲ್ಲಿಸಿದ್ದು ಅರ್ಜಿ ವಿಚಾರಣೆ ನಡೆಸಿದ 3ನೇ ಎಸಿಎಂಎಂ ಕೋರ್ಟ್‌, ಜಾಮೀನು ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಟರ್‌ಗೆ ಸೂಚನೆ ನೀಡಿ ವಿಚಾರಣೆಯನ್ನು ಸೆಪ್ಟೆಂಬರ್ 26ಕ್ಕೆ ಮುಂದೂಡಿದೆ.
ಅರ್ಜಿ ವಿಚಾರಣೆ ಮುಂದೂಡಿಕೆ:
ಪ್ರಕರಣ ಸಂಬಂಧ ಜಾಮೀನು ಕೋರಿ ರಮೇಶ್, ಚನ್ನನಾಯ್ಕ್‌, ಧನರಾಜ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್‌, ಜಾಮೀನು ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಟರ್‌ಗೆ ಸೂಚನೆ ನೀಡಿ ವಿಚಾರಣೆಯನ್ನು ಸೆ.26ಕ್ಕೆ ಮುಂದೂಡಿತು.
ಸಿಸಿಬಿ ತನಿಖಾಧಿಕಾರಿಯವರು ಚೈತ್ರಾ ಮತ್ತು ಇತರೆ ಆರೋಪಿಗಳನ್ನು ವಿಚಾರಣೆ ನಡೆಸಿ ಎಲ್ಲಾ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ವಿಚಾರಣೆಗೆ ಹಾಜರಾಗುವಂತೆ ಚೈತ್ರಾ ಹಾಗೂ ಅಭಿನವ ಹಾಲಶ್ರೀ ಆಪ್ತರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಹಾಲಶ್ರೀ ಅವರ ವಿಚಾರಣೆಯನ್ನು ಪೊಲೀಸರು ಮುಂದುವರಿಸಿದ್ದಾರೆ.
ಚೈತ್ರಾ ಮತ್ತು ಅವರ ಸಹಚರರಿಂದ ವಂಚನೆಯಾಗಿದೆ ಎಂದು ಆರೋಪಿಸಿ ಉದ್ಯಮಿ ಗೋವಿಂದ್ ಬಾಬು ಪೂಜಾರಿ ಅವರು ಪ್ರಕರಣ ದಾಖಲಿಸಿದ ನಂತರ ಬಿಜೆಪಿ ಶಾಸಕ ಟಿಕೆಟ್ ಹಗರಣ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಬೈಂದೂರಿನಿಂದ ಬಿಜೆಪಿ ಟಿಕೆಟ್ ನೀಡುವ ಭರವಸೆ ನೀಡಿದ ನಂತರ ಚೈತ್ರಾ, ಅಭಿನವ ಹಾಲಶ್ರೀ ಮತ್ತು ಇತರರಿಗೆ ಹಣ ನೀಡಿದ್ದಾಗಿ ಪೂಜಾರಿ ದೂರು ನೀಡಿದ್ದರು.