
ಕಲಬುರಗಿ,ಆ.29-ನಗರದ ಪ್ರಾದೇಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ಆಳಂದ ಮತ್ತು ಕಲಬುರಗಿ ತಾಲೂಕಿನ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆದ ಚೈಲ್ಡ್ ಹೆಲ್ತ್ ಆಕ್ಟಿವ್ ಫಾರ್ ಇಂಪ್ರೂವ್ಡ್ ನ್ಯೂಟ್ರಿಷನ್ ( ಚೈನ್ ) ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜಶೇಖರ ಮಾಲಿ ಅವರು ಸಸಿಗೆ ನೀರು ಉಣಿಸುವ ಮೂಲಕ ಚಾಲನೆ ನೀಡಿದರು.
ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ರವಿಕಂತಿ ಕ್ಯಾತನಾಳ, ಜಿಲ್ಲಾ ಉಪ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸೋಮು ರಾಠೋಡ, ಕಾರ್ಯಕ್ರಮ ಸಂಪನ್ಮೂಲ ವ್ಯಕ್ತಿಗಳಾಗಿ ಗೊಬ್ಬೂರ (ಬಿ) ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ ಬಳೆ ಹಾಗೂ ಮಹಾದೇವಿ ಹತ್ತಿ, ಸೂರ್ಯಕಾಂತ್ ಸಾವಳಗಿ, ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳ ಸಂಯೋಜಕರಾದ ಪ್ರತಿಭಾ, ಆರೋಗ್ಯ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷರಾದ ಸೋಮಶೇಖರ್ ಮದನ್‍ಕರ್, ತಾಲೂಕ ಶಿಕ್ಷಣಾಧಿಕಾರಿಗಳಾದ ವಿಜಯಲಕ್ಷ್ಮಿ ನಂದಿಕೋಲ್ಮಠ, ಶರಣಮ್ಮ ಉಪಸ್ಥಿತರಿದ್ದರು. ಆಳಂದ ತಾಲೂಕ ಹಾಗೂ ಕಲಬುರಗಿ ತಾಲೂಕುಗಳ ಎಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳು ತರಬೇತಿಯನ್ನು ಪಡೆದರು.