ಚೌಳಿ, ಚೊಂಡಿ ಗ್ರಾಮಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ

ಬೀದರ: ಅ.31:ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚೌಳಿ, ಚೊಂಡಿ, ಚೊಂಡಿ ತಾಂಡ ಗ್ರಾಮಗಳಿಗೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು.

ಚೌಳಿ, ಚೊಂಡಿ, ಚೊಂಡಿ ತಾಂಡ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ ಗ್ರಾಮಗಳಲ್ಲಿ ಜನಸ್ಪಂದನ (ಗ್ರಾಮ ಸಂಚಾರ) ಕಾರ್ಯಕ್ರಮ ನಡೆಸಿ, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಗ್ರಾಮಗಳಲ್ಲಿನ ಕೊರೊನಾ ವಾರಿಯರ್ಸ್ ಗಳನ್ನು ಸನ್ಮಾನಿಸಿ ಗೌರವಿಸಿದರು. ಗ್ರಾಮದೆಲ್ಲೆಡೆ ಸಂಚರಿಸಿ, ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಅನೇಕ ಕಡೆಗಳಲ್ಲಿ ಬಿದ್ದ ಮನೆಗಳು, ಗುಡಿಸಲುಗಳನ್ನು ವೀಕ್ಷಿಸಿ ಪರಿಹಾರ ಕಂಡುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮದ ಹಿರಿಯರೊಂದಿಗೆ ಮಾತುಕತೆ ನಡೆಸಿದ ಶಾಸಕರು, ಅವರ ಸಮಸ್ಯೆಗಳನ್ನು ಕೇಳಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅನೇಕರು ತಮ್ಮ ತಮ್ಮ ಸಮಸ್ಯೆಗಳನ್ನು ಶಾಸಕರ ಮೂಲಕ ಅಧಿಕಾರಿಗಳ ಗಮನಕ್ಕೆ ತಂದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿಸಿಕೊಟ್ಟರು.

ಸಿಸಿ ರಸ್ತೆ ಕಾಮಗಾರಿಗೆ ಚಾಲನೆ:

ಗ್ರಾಮ ಸಂಚಾರ ನಡೆಸಿದ ಶಾಸಕರು ಇದೇ ವೇಳೆ ಚೊಂಡಿ ಗ್ರಾಮದ ಬಸವೇಶ್ವರ ದೇವಸ್ಥಾನದ ಹತ್ತಿರ ಪಿಆ??? ವತಿಯಿಂದ ನಿರ್ಮಿಸಲಾಗುತ್ತಿರುವ ಹತ್ತು ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ನಹೀಮ್ ಪಟೇಲ್, ಮುಖಂಡರಾದ ವಿನೋದ ಪಾಟೀಲ್, ಶಾಂತ್ ಪಾಟೀಲ್ ಸೇರಿದಂತೆ ಅನೇಕರಿದ್ದರು.