‘ಛಲ’ದ ಸಾಧನೆಯಿಂದ ವ್ಯಕ್ತಿ ಮೌಲ್ಯದ ಪ್ರತಿನಿಧಿ

ಪುತ್ತೂರು, ಡಿ.೩೦- ಬದುಕಿನಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡಾಗ ಜೀವನದ ಪಯಣ ಸುಗಮವಾಗುತ್ತದೆ. ಎದುರಾಗುವ ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸುವಲ್ಲಿ ವ್ಯಕ್ತಿತ್ವದ ಗಟ್ಟಿತನ ಪ್ರಕಟಗೊಳ್ಳುತ್ತದೆ. ವಿಪತ್ತಿನ ಸಂದರ್ಭದಲ್ಲಿ ಧೈರ್ಯವನ್ನು ಕಳೆದುಕೊಳ್ಳದೆ ಛಲದಿಂದ ಮುನ್ನಡೆದರೆ ವ್ಯಕ್ತಿಮೌಲ್ಯದ ಉತ್ತಮ ಪ್ರತಿನಿಧಿಯಾಗಿ ಮೂಡಿ ಬರಲು ಸಾಧ್ಯ ಎಂದು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಹೇಳಿದರು.

ವಿವೇಕಾನಂದ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್‌ನ ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಮುಖ್ಯ ಅತಿಥಿಯಾಗಿದ್ದು, ಶುಭಾಶಂಸನೆಗೈದರು. ಕಾಲೇಜ್‌ನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ. ಅಧ್ಯಕ್ಷತೆ ವಹಿಸಿದ್ದರು. 

ವಿಶೇಷ ಸನ್ಮಾನ   

ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳು ಸೇರಿದಂತೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ೨೨೪ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯೆ ವತ್ಸಲಾ ರಾಜ್ಞಿ, ರವಿ ಮುಂಗ್ಲಿಮನೆ, ವಿವೇಕಾನಂದ ಪದವಿ ಕಾಲೇಜ್‌ನ ಪ್ರಾಂಶುಪಾಲ ಪ್ರೊ.ವಿ.ಜಿ. ಭಟ್, ವಿವೇಕಾನಂದ ಪದವಿ ಪೂರ್ವ ಕಾಲೇಜ್‌ನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು. ಕಾಲೇಜ್‌ನ ಆಂಗ್ಲ ವಿಭಾಗದ ಮುಖ್ಯಸ್ಥ ಪರಮೇಶ್ವರ ಶರ್ಮ ಸ್ವಾಗತಿಸಿ, ಚೈತ್ರ ವಂದಿಸಿದರು. ಉಪನ್ಯಾಸಕಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.